ದುಬೈ: ಅಮೆರಿಕ ಮತ್ತು ಇರಾನ್ ನಡುವೆ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಯುಎಇನ ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದ್ದು, ಮೂವರು ಭಾರತೀಯರು ಗಾಯಗೊಂಡಿದ್ದಾರೆ.

ಏಪ್ರಿಲ್ 8ರ ದುರ್ಬಲ ಕದನ ವಿರಾಮದ ನಂತರ ಇರಾನ್ನಿಂದ ಗಲ್ಫ್ ದೇಶಗಳಲ್ಲಿ ನಡೆದ ಮೊದಲ ದಾಳಿ ಇದಾಗಿದೆ. ಈ ದಾಳಿಯಲ್ಲಿ ಭಾರತೀಯರಿಗೆ ಗಾಯವಾದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಂಡನೆ ವ್ಯಕ್ತಪಡಿಸಿದೆ.

'ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ನಡೆದ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿರುವುದು ಸ್ವೀಕಾರಾರ್ಹವಲ್ಲ. ನಾಗರಿಕ ಮೂಲಸೌಕರ್ಯ ಮತ್ತು ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಯನ್ನು ಕೂಡಲೇ ನಿಲ್ಲಿಸಬೇಕೆಂದು ಕರೆ ನೀಡುತ್ತೇವೆ’ ಎಂದು ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾದಾದ್ಯಂತ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ನಿಟ್ಟಿನಲ್ಲಿ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಭಾರತ ಬೆಂಬಲ ನೀಡುತ್ತಿದೆ ಎಂದು ಸಚಿವಾಲಯ ಹೇಳಿದೆ.

‘ಅಂತರರಾಷ್ಟ್ರೀಯ ಕಾನೂನಿಗೆ ಅನುಸಾರವಾಗಿ ಹೊರ್ಮುಜ್ ಜಲಸಂಧಿಯ ಮೂಲಕ ವಾಣಿಜ್ಯ ಹಡಗುಗಳ ಮುಕ್ತ ಸಂಚಾರಕ್ಕೆ ನಾವು ಕರೆ ನೀಡುತ್ತೇವೆ. ಸಮಸ್ಯೆಗಳ ಶಾಂತಿಯುತ ಪರಿಹಾರಕ್ಕಾಗಿ ಭಾರತ ಎಲ್ಲ ಪ್ರಯತ್ನಗಳನ್ನು ಬೆಂಬಲಿಸಲು ಸಿದ್ಧವಾಗಿದೆ’ಎಂದು ಪೋಸ್ಟ್ ಹೇಳಿದ್ದಾರೆ.

ಇರಾನ್ ಹಾರಿಸಿದ 15 ಕ್ಷಿಪಣಿ ಮತ್ತು ನಾಲ್ಕು ಡ್ರೋನ್ಗಳನ್ನು ತಮ್ಮ ವಾಯುರಕ್ಷಣಾ ವ್ಯವಸ್ಥೆ ಹೊಡೆದುರುಳಿಸಿದೆ ಎಂದು ಯುಎಇ ಹೇಳಿದೆ. ಆದರೆ, ಒಂದು ಕ್ಷಿಪಣಿ ಫ್ಯೂಜೆರಾಹ್ ಕೈಗಾರಿಕಾ ವಲಯದಲ್ಲಿ ಬಿದ್ದಿದ್ದು, ಬೆಂಕಿ ಹೊತ್ತಿಕೊಂಡಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಭಾರತೀಯ ಪ್ರಜೆಗಳು ಗಾಯಗೊಂಡಿದ್ದಾರೆ ಎಂದು ಅದು ತಿಳಿಸಿದೆ.

ಯುಎಇ ಬಳಿ ಎರಡು ಹಡಗುಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಬ್ರಿಟನ್ ಮಿಲಿಟರಿ ಹೇಳಿದೆ.

ದಾಳಿ ಯೋಜಿತವಲ್ಲ ಎಂದ ಇರಾನ್

ದಾಳಿಗಳನ್ನು ಇರಾನ್ ಸಂಪೂರ್ಣವಾಗಿ ದೃಢಪಡಿಸಿಲ್ಲ. ನಿರಾಕರಿಸಿಯೂ ಇಲ್ಲ. ಅಮೆರಿಕ ಮತ್ತು ಯುಎಇ ಎರಡೂ ದೇಶಗಳು ಮತ್ತೆ ಕೆಸರಿನೊಳಗೆ ಎಳೆಯಲ್ಪಡುವ ಬಗ್ಗೆ ಎಚ್ಚರದಿಂದಿರಬೇಕು ಎಂದು ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಇರಾನ್, ಯುಎಇ ಮತ್ತು ಅದರ ತೈಲ ಘಟಕಗಳನ್ನು ಗುರಿಯಾಗಿಸಿಕೊಳ್ಳುವ ಯೋಜನೆ ಹೊಂದಿಲ್ಲ ಎಂದು ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ದಾಳಿಯು ಅಕ್ರಮ ಜಲಮಾರ್ಗವನ್ನು ಸೃಷ್ಟಿಸುವ ಅಮೆರಿಕದ ಮಿಲಿಟರಿ ಸಾಹಸದಿಂದ ಆಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.