ಶುಕ್ರವಾರ, 25 ಜುಲೈ 2025
×
ADVERTISEMENT
ADVERTISEMENT

Iran Israel Conflict | ಇರಾನ್‌ನಿಂದ 292 ಭಾರತೀಯರು ತಾಯ್ನಾಡಿಗೆ ವಾಪಸ್‌

Published : 24 ಜೂನ್ 2025, 9:33 IST
Last Updated : 24 ಜೂನ್ 2025, 9:33 IST
ಫಾಲೋ ಮಾಡಿ
0
Iran Israel Conflict | ಇರಾನ್‌ನಿಂದ 292 ಭಾರತೀಯರು ತಾಯ್ನಾಡಿಗೆ ವಾಪಸ್‌

ಇರಾನ್‌ನಿಂದ ಭಾರತೀಯರು ತಾಯ್ನಾಡಿಗೆ ಮರಳಿದರು.

ಪಿಟಿಐ ಚಿತ್ರ

ನವದೆಹಲಿ: ಸಂಘರ್ಷ ಪೀಡಿತ ಇರಾನ್‌ನಿಂದ 292 ಭಾರತೀಯರನ್ನು ಸುರಕ್ಷಿತವಾಗಿ ಮಂಗಳವಾರ ತಾಯ್ನಾಡಿಗೆ ಕರೆತರಲಾಯಿತು ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ADVERTISEMENT
ADVERTISEMENT

ಇಂದು ಮುಂಜಾನೆ 3:30ಕ್ಕೆ ಮಶಾದ್‌ನಿಂದ ನವದೆಹಲಿಗೆ ವಿಶೇಷ ವಿಮಾನದಲ್ಲಿ ಭಾರತೀಯರು ತಾಯ್ನಾಡಿಗೆ ವಾಪಸ್‌ ಆಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಬೆನ್ನಲ್ಲೇ ಆಪರೇಷನ್ ಸಿಂಧು ಕಾರ್ಯಾಚರಣೆಯ ಮೂಲಕ ಇರಾನ್‌ನಿಂದ ಇದುವರೆಗೂ 2,295 ಮಂದಿ ಭಾರತಕ್ಕೆ ಮರಳಿದ್ದಾರೆ.

ಅಮೆರಿಕ ಇರಾನಿನ ಮೂರು ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿದ ಬಳಿಕ ಉದ್ವಿಗ್ನತೆ ಪರಿಸ್ಥಿತಿ ಹೆಚ್ಚಾಗಿತ್ತು.

ADVERTISEMENT

ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ಭಾರತೀಯರನ್ನು ತಾಯ್ನಾಡಿಗೆ ಕರೆ ತರುವ ಪ್ರಯತ್ನದ ಭಾಗವಾಗಿ ಭಾರತ ಕಳೆದ ವಾರ ಆಪರೇಷನ್ ‘ಸಿಂಧೂ‘ ಎಂಬ ಕಾರ್ಯಾಚರಣೆಯನ್ನು ಆರಂಭಿಸಿತ್ತು.

ಪಶ್ಚಿಮ ಏಷ್ಯಾ ಮತ್ತು ಯುರೋಪ್‌ನಲ್ಲಿ ನಡೆಯುತ್ತಿರುವ ಸಂಘರ್ಷಗಳ ಕುರಿತು ಕಳವಳ ವ್ಯಕ್ತಪಡಿಸಿದ್ದು, ಇದು ಯುದ್ಧದ ಯುಗವಲ್ಲ. ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಸ್ಥಿರತೆ ಪುನಃಸ್ಥಾಪನೆಗೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
Comments0