ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ಮೇ 21ರಂದು ಭಾರತದಾದ್ಯಂತ ಶೋಕಾಚರಣೆ

Published 20 ಮೇ 2024, 13:17 IST
Last Updated 20 ಮೇ 2024, 13:17 IST
ಅಕ್ಷರ ಗಾತ್ರ

ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಗೌರವಾರ್ಥ ಮಂಗಳವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.

'ಶೋಕಾಚರಣೆಯ ದಿನದಂದು, ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಭಾರತದಾದ್ಯಂತ ಅರ್ಧಕ್ಕೆ ಹಾರಿಸಲಾಗುತ್ತದೆ ಮತ್ತು ಯಾವುದೇ ಅಧಿಕೃತ ಕಾರ್ಯಕ್ರಮ ಇರುವುದಿಲ್ಲ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಭಾನುವಾರ ಅಜೆರ್‌ ಬೈಜಾನ್‌ ಪ್ರಾಂತ್ಯದ ಗಡಿಯ ಗುಡ್ಡಪ್ರದೇಶಗಳ ವ್ಯಾಪ್ತಿಯಲ್ಲಿ ಅಪಘಾತಕ್ಕೀಡಾಗಿತ್ತು. ಹೆಲಿಕಾಪ್ಟರ್ ಅಪಘಾತದಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ವ್ಯವಹಾರಗಳ ಸಚಿವ ಅಮಿರ್ ಅಬ್ದೊಲ್ಲಾಹಿಯಾನ್ ಹಾಗೂ ಕೆಲ ಹಿರಿಯ ಅಧಿಕಾರಿಗಳು ಮೃತಪಟ್ಟಿದ್ದರು.

'ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರ ಮೇ 21 ರಂದು (ಮಂಗಳವಾರ) ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ' ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT