ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ಐಆರ್‌ಬಿ ಸಿಬ್ಬಂದಿ: ಇಬ್ಬರು ಯೋಧರ ಸಾವು

ಗುಜರಾತ್‌ನ ಪೋರ್‌ಬಂದರ್‌ನಲ್ಲಿ ನಡೆದ ಘಟನೆ
Last Updated 27 ನವೆಂಬರ್ 2022, 2:22 IST
ಅಕ್ಷರ ಗಾತ್ರ

ಪೋರ್‌ಬಂದರ್: ಗುಜರಾತ್‌ನ ಪೋರ್‌ಬಂದರ್‌ನಲ್ಲಿ ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್‌ಬಿ)ನ ಯೋಧರೊಬ್ಬರು ತಮ್ಮ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ಸಿಬ್ಬಂದಿ ನಡುವೆ ಯಾವುದೋ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ನಂತರ ಯೋಧ ತಮ್ಮ ಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಗುಂಡು ತಾಗಿ ಇಬ್ಬರು ಯೋಧರು ಮೃತಪಟ್ಟರೆ, ಇಬ್ಬರು ಯೋಧರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಜರಾತ್‌ನಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಸಂಬಂಧಿಸಿದಂತೆ, ಯೋಧರು ಭದ್ರತೆಗಾಗಿ ಕಾರ್ಯನಿರ್ವಹಿಸುತ್ತಿದ್ದರು.

ಶನಿವಾರ ಸಂಜೆ ಕರ್ತವ್ಯದಲ್ಲಿದ್ದ ಯೋಧರ ನಡುವೆ ಮಾತುಕತೆ ನಡೆದಿದ್ದು, ನಂತರದಲ್ಲಿ ಅದು ಕಲಹಕ್ಕೆ ತಿರುಗಿದೆ.

ಗುಂಡು ಹಾರಿಸಿದ ಯೋಧ, ಮಣಿಪುರ ಘಟಕದ ಸಿಬ್ಬಂದಿ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT