ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂದೇಶ್‌ಖಾಲಿ ಹಿಂಸಾಚಾರ: ಇಂಡಿಯನ್ ಸೆಕ್ಯುಲರ್ ಫ್ರಂಟ್‌ ನಾಯಕಿ ಆಯೇಷಾ ಬೀಬಿ ಬಂಧನ

Published 25 ಫೆಬ್ರುವರಿ 2024, 7:56 IST
Last Updated 25 ಫೆಬ್ರುವರಿ 2024, 7:56 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಪ್ರದೇಶದಲ್ಲಿ ಟಿಎಂಸಿ ನಾಯಕ ಶಿವಪ್ರಸಾದ್ ಹಜ್ರಾ ಅವರ ಕೋಳಿ ಫಾರಂಗಳಿಗೆ ಬೆಂಕಿ ಹಚ್ಚಿದ ಆರೋಪದಲ್ಲಿ ಇಂಡಿಯನ್ ಸೆಕ್ಯುಲರ್‌ ಫ್ರಂಟ್ (ಐಎಸ್‌ಎಫ್) ನಾಯಕಿ ಆಯೇಷಾ ಬೀಬಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೃತ್ಯದಲ್ಲಿ ಭಾಗಿಯಾಗಿದ್ದ ಕೆಲವು ಗ್ರಾಮಸ್ಥರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸಂದೇಶ್‌ಖಾಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಆಯೇಷಾ ಬೀಬಿ ಕಾನೂನು ಕೈಗೆತ್ತಿಕೊಂಡಿರುವುದು ಸಾಬೀತಾಗಿದೆ. ಆದ್ದರಿಂದ ಕಾನೂನಿನ ಅನುಸಾರವಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಂದೇಶ್‌ಖಾಲಿಯಲ್ಲಿ ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ ಮತ್ತು ಅವರ ಬೆಂಬಲಿಗರು ಭೂ ಕಬಳಿಕೆ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ನಂತರದಲ್ಲಿ ರಾಜಕೀಯ ಗದ್ದಲ ಭುಗಿಲೆದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT