ನವದೆಹಲಿ: ಗಾಜಾದಲ್ಲಿ ಇಸ್ರೇಲ್ ನರಮೇಧ ನಿರಂತರವಾಗಿ ಮುಂದುವರೆದಿರುವುದನ್ನು ಖಂಡಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿಯವರ ಮೌನವು ಭಾರತದ ನೈತಿಕ ಮತ್ತು ರಾಜಕೀಯ ಸ್ಥಾನಮಾನವನ್ನು ಕುಗ್ಗಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜೈರಾಮ್, ಇರಾನ್– ಇಸ್ರೇಲ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಕದನ ವಿರಾಮ ಜಾರಿಯಲ್ಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಆದರೆ ಇಸ್ರೇಲ್ ನರಮೇಧ ನಿರಂತರವಾಗಿ ನಡೆಯುತ್ತಿರುವ ಗಾಜಾದಲ್ಲಿ ಇನ್ನೂ ಕದನ ವಿರಾಮ ಘೋಷಣೆಯಾಗಿಲ್ಲ ಎಂದು ಜೈರಾಮ್ ಕಳವಳ ವ್ಯಕ್ತಪಡಿಸಿದ್ದಾರೆ.
.ಹಾವೇರಿ | ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಕೊಲೆ: ಶಿಗ್ಗಾವಿಯಲ್ಲಿ ಘಟನೆ.ಮಾವಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಕೇಂದ್ರ ಕೃಷಿ ಸಚಿವರಿಗೆ ಎಚ್ಡಿಕೆ ಪತ್ರ.
ಒಂದೂವರೆ ವರ್ಷದಿಂದ ಪ್ಯಾಲೆಸ್ಟೀನಿಯನ್ನರನ್ನು ಕಾಡುತ್ತಿರುವ ಈ ದುರಂತದ ಬಗ್ಗೆ ಪ್ರಧಾನಿ ಮೋದಿಯವರ ಮೌನವು ಕಿವುಡಾಗಿಸುವಂತಿದ್ದು, ಭಾರತದ ನೈತಿಕ ಮತ್ತು ರಾಜಕೀಯ ಸ್ಥಾನಮಾನ ಕುಗ್ಗಿಸಿದೆ ಎಂದು ರಮೇಶ್ ತಿಳಿಸಿದ್ದಾರೆ.

ಗಾಜಾ ಮತ್ತು ಇರಾನ್ನಲ್ಲಿ ಇಸ್ರೇಲ್ ನಡೆಸಿದ ದಾಳಿಗಳ ಬಗ್ಗೆ ಭಾರತದ ಮೌನವು ಧ್ವನಿ ಅಡಗಿಸಿಕೊಳ್ಳುವ ಜತೆಗೆ ಮೌಲ್ಯಗಳ ಶರಣಾಗತಿಯೂ ಆಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ‘ದಿ ಹಿಂದೂ‘ ಪತ್ರಿಕೆಯ ಲೇಖನವೊಂದರಲ್ಲಿ ಉಲ್ಲೇಖಿಸುವ ಮೂಲಕ ಟೀಕಿಸಿದ್ದರು. ಇದರ ಬೆನ್ನಲ್ಲೇ ಜೈರಾಮ್ ರಮೇಶ್ ಮೋದಿ ವಿರುದ್ಧ ಕುಟುಕಿದ್ದಾರೆ.
.ದುಡ್ಡಿಲ್ಲ ಅಂತಾ ಪರಮೇಶ್ವರ್ ಬಾಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಸಿದ್ದಾರೆ: ಬಿಜೆಪಿ.ಕಾನೂನಿನ ಪ್ರಕಾರವೇ ಎಲ್ಲಾ ಚುನಾವಣೆಗಳು ನಡೆದಿವೆ: ರಾಹುಲ್ ಆರೋಪಕ್ಕೆ EC ತಿರುಗೇಟು.
‘ಇನ್ನೂ ತಡವಾಗಿಲ್ಲ, ಭಾರತವು ಸ್ಪಷ್ಟವಾಗಿ ಮಾತನಾಡಬೇಕು ಮತ್ತು ಜವಾಬ್ದಾರಿಯುತವಾಗಿ ವರ್ತಿಸಬೇಕು. ಪಶ್ಚಿಮ ಏಷ್ಯಾದ ಉದ್ವಿಗ್ನತೆಯನ್ನು ಮಾತುಕತೆಯ ಮೂಲಕ ಶಮನಗೊಳಿಸುವಂತೆ ಲಭ್ಯವಿರುವ ಪ್ರತಿಯೊಂದು ರಾಜತಾಂತ್ರಿಕ ಮಾರ್ಗವನ್ನು ಬಳಸಬೇಕು‘ಎಂದು ಸೋನಿಯಾ ತಿಳಿಸಿದ್ದರು.
.Iran Israel Conflict | ಇರಾನ್ನಿಂದ 292 ಭಾರತೀಯರು ತಾಯ್ನಾಡಿಗೆ ವಾಪಸ್.ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ: ಮೊದಲ ಬಾರಿಗೆ ಅಗ್ರ 100ರಲ್ಲಿ ಭಾರತಕ್ಕೆ ಸ್ಥಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.