ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇತಿಹಾಸ ಬರೆದ ಇಸ್ರೊ; ಚಂದ್ರನ ದಕ್ಷಿಣ ಧ್ರುವಕ್ಕೆ ಅಡಿ ಇಟ್ಟ ಮೊದಲ ದೇಶ ಭಾರತ

Published 23 ಆಗಸ್ಟ್ 2023, 13:15 IST
Last Updated 23 ಆಗಸ್ಟ್ 2023, 13:15 IST
ಅಕ್ಷರ ಗಾತ್ರ

ಬೆಂಗಳೂರು: ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದ ಪ್ರದೇಶದಲ್ಲಿ ಇಳಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಧೆಯ (ಇಸ್ರೊ) ಘೋಷಿಸಿದೆ.

Chandrayaan-3: ಭಾರತ ಐತಿಹಾಸಿಕ ಸಾಧನೆ; ಚಂದ್ರಯಾನ-3 ಯೋಜನೆ ಯಶಸ್ವಿ

ಬಳಿಕ ಪ್ರತಿಕ್ರಿಯಿಸಿರುವ ಚಂದ್ರಯಾನ-3 ಯೋಜನೆಯ ಕಾರ್ಯಾಚರಣಾ ನಿರ್ದೇಶಕ ಪಿ. ವೀರಮುತ್ತುವೇಲ್, ಭಾರತವು ಚಂದ್ರನ ದಕ್ಷಿಣ ಧ್ರುವದಲ್ಲಿ ಕಾರ್ಯಾಚರಣೆ ನಡೆಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.

ಇದರ ಜೊತೆಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಮತ್ತು ರೋವರ್ ಇಳಿಸಿದ ನಾಲ್ಕನೇ ದೇಶ ಎನಿಸಿಕೊಂಡಿದೆ. ಚಂದ್ರನಲ್ಲಿ ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಯಶಸ್ವಿ ಕಾರ್ಯಾಚರಣೆ ನಡೆಸಿವೆ.

2019ರಲ್ಲಿ ಭಾರತದ ಚಂದ್ರಯಾನ-2 ಯೋಜನೆ ಭಾಗಶಃ ಯಶ ಕಂಡಿತ್ತು.

ಚಂದ್ರಯಾನ-3 ಲೈವ್ ಅಪ್‌ಡೇಟ್ಸ್ ಇಲ್ಲಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT