ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಿಗಂತರ’ ಉದ್ಘಾಟಿಸಿದ ಇಸ್ರೋ ಅಧ್ಯಕ್ಷ ಸೋಮನಾಥ್

Published 20 ಏಪ್ರಿಲ್ 2024, 0:59 IST
Last Updated 20 ಏಪ್ರಿಲ್ 2024, 0:59 IST
ಅಕ್ಷರ ಗಾತ್ರ

ನವದೆಹಲಿ: ಬಾಹ್ಯಾಕಾಶ ಕಣ್ಗಾವಲು ಉಪಗ್ರಹವನ್ನು ಉಡಾಯಿಸಲು ಬೆಂಗಳೂರಿನಲ್ಲಿ ಸಜ್ಜುಗೊಂಡಿರುವ ಬಾಹ್ಯಾಕಾಶ ವಲಯದ ಸ್ಟಾರ್ಟ್ ಅಪ್‌ ‘ದಿಗಂತರ’ದ ಜಾಗತಿಕ ಪ್ರಧಾನ ಕಚೇರಿಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಅಧ್ಯಕ್ಷ ಎಸ್‌. ಸೋಮನಾಥ್ ಶುಕ್ರವಾರ ಉದ್ಘಾಟಿಸಿದರು.

ಬೆಂಗಳೂರಿನ ಹೆಬ್ಬಾಳದಲ್ಲಿ 25 ಸಾವಿರ ಚದರಡಿ ವಿಸ್ತೀರ್ಣದಲ್ಲಿರುವ ಪ್ರಧಾನ ಕಚೇರಿಯು ಉಪಗ್ರಹ ಜೋಡಣೆ, ಸಮಗ್ರೀಕರಣ ಮತ್ತು ಪರೀಕ್ಷೆ (ಎಐಟಿ) ಸೌಲಭ್ಯ ಹಾಗೂ ಸಮಗ್ರ ಬಾಹ್ಯಾಕಾಶದ ಅಧಿಪತ್ಯದ ಕುರಿತು ಜಾಗೃತಿ ಮೂಡಿಸುವ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಒಳಗೊಂಡಿದೆ.

‘ಈ ಸೌಲಭ್ಯವು ಬಾಹ್ಯಾಕಾಶದಲ್ಲಿ ಉಪಗ್ರಹಗಳ ಸಂಚಾರದ ಮೇಲ್ವಿಚಾರಣೆ ಮಾಡಲು ಮತ್ತು ನಿರ್ವಹಿಸಲು, ಜಗತ್ತಿನಾದ್ಯಂತ ಉಪಗ್ರಹ ಕಾರ್ಯಾಚರಣೆಗಳ ಸುರಕ್ಷತೆ ಮತ್ತು ಸುಸ್ಥಿರತೆಯನ್ನು ಖಾತ್ರಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ’ ಎಂದು ‘ದಿಗಂತರ’ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT