ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೊದಿಂದ ಅಯೋಧ್ಯೆ ರಾಮ ಮಂದಿರದ ಸ್ಯಾಟಲೈಟ್ ಚಿತ್ರ ಬಿಡುಗಡೆ

Published 21 ಜನವರಿ 2024, 9:11 IST
Last Updated 21 ಜನವರಿ 2024, 9:11 IST
ಅಕ್ಷರ ಗಾತ್ರ

ಬೆಂಗಳೂರು: ಬಾಹ್ಯಾಕಾಶದಲ್ಲಿ ಉಪಗ್ರಹದಿಂದ ಸೆರೆ ಹಿಡಿಯಲಾದ ಅಯೋಧ್ಯೆ ರಾಮ ಮಂದಿರದ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಬಿಡುಗಡೆಗೊಳಿಸಿದೆ.

ಈ ಚಿತ್ರವನ್ನು ಹೈದರಾಬಾದ್‍ನ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಕೇಂದ್ರವು ಹಂಚಿಕೊಂಡಿದೆ.

ಕಳೆದ ವರ್ಷ ಡಿಸೆಂಬರ್ 16ರಂದು ಅಯೋಧ್ಯೆ ರಾಮ ಮಂದಿರದ ಸ್ಯಾಟಲೈಟ್ ಚಿತ್ರವನ್ನು ತೆಗೆಯಲಾಗಿದೆ.

ದಶರಥ ಮಹಲ್, ಅಯೋಧ್ಯೆ ರೈಲ್ವೆ ನಿಲ್ದಾಣ ಹಾಗೂ ಸರಯುೂ ನದಿಯನ್ನು ಚಿತ್ರದಲ್ಲಿ ಕಾಣಬಹುದಾಗಿದೆ.

ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಸೋಮವಾರ (ನಾಳೆ) ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT