ರಾಜ್ಯ, ರಾಷ್ಟ್ರೀಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ ಹತ್ತು ಸುದ್ದಿಗಳು..
ಸೂರ್ಯನ ಬಾಹ್ಯ ವಾತಾವರಣದ ಅಧ್ಯಯನಕ್ಕಾಗಿ 'ಆದಿತ್ಯ–ಎಲ್ 1' ಬಾಹ್ಯಾಕಾಶ ನೌಕೆಯನ್ನು ಇಸ್ರೊ ಯಶಸ್ವಿಯಾಗಿ ಉಡ್ಡಯನಗೊಳಿಸಿದೆ. ನೌಕೆಯು ಯಶಸ್ವಿಯಾಗಿ ನಿಗದಿತ ಕಕ್ಷೆ ಸೇರಿದೆ.
ನವದೆಹಲಿಯಲ್ಲಿ ನಡೆಯಲಿರುವ ಜಿ-20 ನಾಯಕರ ಶೃಂಗಸಭೆಯಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಪಾಲ್ಗೊಳ್ಳಲಿದ್ದಾರೆ. ಅವರು ಸೆಪ್ಟೆಂಬರ್ 7ರಂದು ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 8ರಂದು ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಶ್ವೇತಭವನವು ತಿಳಿಸಿದೆ.
ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
'ಇಂಡಿಯಾ' ಮೈತ್ರಿಕೂಟವು ಮಹಾತ್ಮ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ಆಕ್ಟೋಬರ್ 2ರಂದು ದೇಶದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಹೇಳಿದ್ದಾರೆ.
ಏಷ್ಯಾಪಕ್ ಏಕದಿನ ಕ್ರಿಕೆಟ್ ಟೂರ್ನಿಯ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿವೆ. ಭಾರತ ತಂಡ 36 ಓವರ್‌ಗಳ ಅಂತ್ಯಕ್ಕೆ 4 ವಿಕೆಟ್‌ಗಳನ್ನು ಕಳೆದುಕೊಂಡು 187 ರನ್ ಗಳಿಸಿದ್ದು, ಸವಾಲಿನ ಮೊತ್ತದತ್ತ ಮುನ್ನಡೆದಿದೆ. ಇಶಾನ್ ಕಿಶನ್ (75) ಮತ್ತು ಹಾರ್ದಿಕ್ ಪಾಂಡ್ಯ (56) ಕ್ರೀಸ್‌ನಲ್ಲಿದ್ದಾರೆ.
ಲೋಕಸಭಾ ಚುನಾವಣೆಗೆ ಸಾಕಷ್ಟು ಸಮಯವಿದ್ದರೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಂಟು ಜನ ಸಂಸದರಿಗೆ ಟಿಕೆಟ್ ಇಲ್ಲವೆಂದು ಹೇಳುತ್ತಿದ್ದಾರೆ. ಅವರು ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ; ಪಕ್ಷ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಸಂಗಣ್ಣ ಕರಡಿ ಆಗ್ರಹಿಸಿದರು.
ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಬಿದ ಕೃಷ್ಣಾ ಜಲಾಶಯಕ್ಕೆ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು.
ಕೋಟಕ್ ಮಹೀಂದ್ರ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸ್ಥಾನಕ್ಕೆ ಉದಯ್ ಕೋಟಕ್ ಅವರು ರಾಜೀನಾಮೆ ನೀಡಿದ್ದಾರೆ.
'ಲೋಕಸಭಾ ಚುನಾವಣೆಗೆ ಮುನ್ನ ಅಥವಾ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರೊಲ್ಲ' ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ವಾರಾಣಸಿಯಲ್ಲಿನ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಮತ್ತೆ ಎಂಟು ವಾರ ಸಮಾವಕಾಶ ಕೋರಿದೆ.