ನವದೆಹಲಿ: ಭಾರತವು ತನ್ನ ರಕ್ಷಣಾ ವಲಯದ ಕಣ್ಗಾವಲು ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಿನ ಐದು ವರ್ಷಗಳಲ್ಲಿ ಖಾಸಗಿ ಸಹಯೋಗಿತ್ವದಲ್ಲಿ 52 ಬೇಹುಗಾರಿಕಾ ಉಪಗ್ರಹಗಳನ್ನು ಕಕ್ಷೆಗೆ ಕಳುಹಿಸಲಿದೆ ಎಂದು ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರದ (ಇನ್–ಸ್ಪೇಸ್) ಅಧ್ಯಕ್ಷ ಪವನ್ ಕುಮಾರ್ ಗೋಯೆಂಕಾ ತಿಳಿಸಿದ್ದಾರೆ.

ಈ ಉಪಗ್ರಹಗಳ ಮೂಲಕ ಭಾರತವು ತನ್ನ ಬಾಹ್ಯಾಕಾಶ ಆಧಾರಿತ ಕಣ್ಗಾವಲು ಸಾಮರ್ಥ್ಯವನ್ನೂ ವೃದ್ಧಿಸಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಜಾಗತಿಕ ಬಾಹ್ಯಾಕಾಶ ಪರಿಶೋಧನಾ ಸಮ್ಮೇಳನ– 2025ರಲ್ಲಿ ಅವರು ಪಿಟಿಐ ಸುದ್ದಿ ಸಂಸ್ಥೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ.

ಶತೃಗಳ ಚಲನವಲನಗಳನ್ನು ಪತ್ತೆ ಹಚ್ಚಲು ಮತ್ತು ಗಡಿಗಳ ಮೇಲ್ವಿಚಾರಣೆ ನಡೆಸಲು ಭಾರತದ ಸೇನಾಪಡೆ, ನೌಕಾಪಡೆ ಮತ್ತು ವಾಯು ಪಡೆಗಳಿಗೆ ಈ ಉಪಗ್ರಹಗಳು ಅತ್ಯಂತ ಉಪಯುಕ್ತವಾಗಲಿವೆ. ಅಲ್ಲದೆ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ಸಮನ್ವಯ ಸಾಧಿಸಲೂ ಸಹಕಾರಿಯಾಗಲಿವೆ ಎಂದು ಅವರು ಹೇಳಿದ್ದಾರೆ.

ಈ 52 ಉಪಗ್ರಹಗಳ ಪೈಕಿ ಅರ್ಧದಷ್ಟನ್ನು ಖಾಸಗಿ ವಲಯ ಪೂರೈಸಿದರೆ, ಉಳಿದವನ್ನು ‘ಇಸ್ರೊ’ ನಿರ್ಮಿಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.