ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಕೀಯ ನಾಯಕರ ಮೇಲೆ ಐಟಿ ದಾಳಿ; ರಾಜಕೀಯ ಕೆಸರೆರಚಾಟ

Published : 9 ನವೆಂಬರ್ 2023, 15:45 IST
Last Updated : 9 ನವೆಂಬರ್ 2023, 15:45 IST
ಫಾಲೋ ಮಾಡಿ
Comments

ಹೈದರಾಬಾದ್‌: ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ರಾಜ್ಯದ ವಿವಿಧ ಪಕ್ಷಗಳ ನಾಯಕರಿಗೆ ಸೇರಿದ ಸ್ವತ್ತುಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಮಾಜಿ ಸಂಸದ, ಪಲೈರ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪೊಂಗುಲೆಟಿ ಶ್ರೀನಿವಾಸ್‌ ರೆಡ್ಡಿ ಅವರ ಮನೆ ಮೇಲೆ ನಡೆದಿರುವ ಐಟಿ ದಾಳಿಯು ಈ ದಾಳಿಗಳ ಸರಣಿಯಲ್ಲಿ ಈಚಿನದ್ದು. 

ಕಮ್ಮಮ್‌ ಮತ್ತು ನಾರಾಯಣಪುರಂ ಮತ್ತು ಹೈದರಾಬಾದ್‌ನಲ್ಲಿ ರೆಡ್ಡಿ ಮತ್ತು ಅವರ ಮಗನಿಗೆ ಸೇರಿದ ಸುಮಾರು 30 ಸ್ವತ್ತುಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ರೆಡ್ಡಿ ಅವರು ಇದಕ್ಕೂ ಮೊದಲು ಐಎಸ್‌ಆರ್‌ ಕಾಂಗ್ರೆಸ್‌ ಪಕ್ಷದಲ್ಲಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಪಕ್ಷವು ಟಿಕೆಟ್‌ ನಿರಾಕರಿಸಿದ ಬಳಿಕ ಅವರು ಕಾಂಗ್ರೆಸ್‌ ಸೇರ್ಪಡೆ ಆಗಿದ್ದರು. 

ಕಾಂಗ್ರೆಸ್‌ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ರೆಡ್ಡಿ ಅವರು ಆರೋಪಿಸಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ಕಾಂಗ್ರೆಸ್‌ ಮತ್ತು ಬಿಆರ್‌ಎಸ್‌ನ ಹಲವಾರು ನಾಯಕರಿಗೆ ಸೇರಿದ ಸ್ವತ್ತುಗಳ ಮೇಲೆ ಐಟಿ ದಾಳಿ ನಡೆದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT