ಹೈದರಾಬಾದ್: ಚುನಾವಣಾ ಹೊಸ್ತಿಲಲ್ಲಿರುವ ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ರೆಡ್ಡಿ ಮನೆ ಹಾಗೂ ಕಚೇರಿ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.
ತೆಲಂಗಾಣ ವಿಧಾನಸಭೆ ಚುನಾವಣೆ ನವೆಂಬರ್ 30ರಂದು ನಡೆಯಲಿದೆ. ಶ್ರೀನಿವಾಸ ರೆಡ್ಡಿ ಅವರು ಖಮ್ಮಂ ಜಿಲ್ಲೆಯ ಪಾಲೇರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ ಶ್ರೀನಿವಾಸ ರೆಡ್ಡಿ, ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ನಡುವೆ ಐ.ಟಿ ಶೋಧ ನಡೆದಿದೆ.
ಶ್ರೀನಿವಾಸ ರೆಡ್ಡಿ ಮೇಲೆ ಐ.ಟಿ ದಾಳಿ ವಿರೋಧಿಸಿ ಕಾಂಗ್ರೆಸ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶಾನಲಯದ ಅಧಿಕಾರಿಗಳು ನಿರಂತರವಾಗಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸುತ್ತಿದೆ ಎಂದು ಶ್ರೀನಿವಾಸ ರೆಡ್ಡಿ ಆರೋಪಿಸಿದ್ದಾರೆ.