ಮುಂಬೈ: ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಡಿಸೆಂಬರ್ 5ರಂದು ನಡೆದ ‘ಮಹಾಯುತಿ’ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಚಿನ್ನದ ಸರಗಳು, ಮೊಬೈಲ್ ಫೋನ್ಗಳು ಮತ್ತು ನಗದು ಸೇರಿದಂತೆ ₹12 ಲಕ್ಷ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣದ ಕುರಿತು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆಜಾದ್ ಮೈದಾನ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

‘ಸಮಾರಂಭದಲ್ಲಿ ಭದ್ರತೆಗಾಗಿ ಸುಮಾರು 4,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ಕಾರ್ಯಕ್ರಮದ ಸ್ಥಳ ಹಾಗೂ ಸುತ್ತಮುತ್ತ ನಿಯೋಜಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಮೈದಾನದ ಗೇಟ್ ಸಂಖ್ಯೆ ಎರಡರಿಂದ ಜನರು ಹೊರಬರುತ್ತಿದ್ದ ಸಮಯದಲ್ಲಿ ಖದೀಮರು ಚಿನ್ನದ ಸರಗಳು, ಮೊಬೈಲ್ ಫೋನ್ಗಳು ಮತ್ತು ನಗದನ್ನು ಕಳ್ಳತನ ಮಾಡಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಠಾಣೆ ಮತ್ತು ಅಪರಾಧ ವಿಭಾಗದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 5ರಂದು ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ದೇವೇಂದ್ರ ಫಡಣವೀಸ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಜೆ.ಪಿ. ನಡ್ಡಾ, ರಾಜನಾಥ ಸಿಂಗ್, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್ ಸೇರಿದಂತೆ ಉದ್ಯಮ, ಚಿತ್ರರಂಗ ಮತ್ತು ರಾಜಕೀಯದ ಪ್ರಮುಖರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.