ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೆಫ್ಟಿನೆಂಟ್ ಗವರ್ನರ್‌ ಸಕ್ಸೇನಾ ಹೇಳಿಕೆ ‘ರಾಜಕೀಯ ಪಿತೂರಿ’ ಎಂದ ಕೇಜ್ರಿವಾಲ್‌

Published 28 ಮಾರ್ಚ್ 2024, 10:03 IST
Last Updated 28 ಮಾರ್ಚ್ 2024, 10:03 IST
ಅಕ್ಷರ ಗಾತ್ರ

ನವದೆಹಲಿ: ‘ಜೈಲಿನಿಂದ ಸರ್ಕಾರ ಮುನ್ನೆಡಸಲು ಸಾಧ್ಯವಿಲ್ಲ’ ಎಂಬ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹೇಳಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌, ‘ಇದೊಂದು ರಾಜಕೀಯ ಪಿತೂರಿ’ ಎಂದು ಹೇಳಿದ್ದಾರೆ.

ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಕೇಜ್ರಿವಾಲ್‌, ‘ಇದಕ್ಕೆಲ್ಲ ಜನರೇ ತಕ್ಕ ಉತ್ತರ ನೀಡಲಿದ್ದಾರೆ’ ಎಂದರು.

ಕೇಜ್ರಿವಾಲ್ ರಾಜೀನಾಮೆಯನ್ನು ತಳ್ಳಿಹಾಕಿರುವ ಎಎಪಿ ನಾಯಕರು, ಕಾರ್ಯಕರ್ತರು, ‘ಕೇಜ್ರಿವಾಲ್ ಅವರು ಜೈಲಿನಿಂದಲೇ ಸರ್ಕಾರವನ್ನು ಮುನ್ನೆಡಸುತ್ತಾರೆ’ ಎಂದು ಒತ್ತಿ ಹೇಳಿದ್ದರು.

ಬುಧವಾರ ಟೈಮ್ಸ್‌ ನೌ ಖಾಸಗಿ ಸುದ್ದಿವಾಹಿನಿ ನಡೆಸಿದ ಶೃಂಗಸಭೆಯಲ್ಲಿ ಮಾತನಾಡಿದ ಸಕ್ಸೇನಾ, ದೆಹಲಿ ಸರ್ಕಾರವನ್ನು ಜೈಲಿನಿಂದ ಮುನ್ನೆಡಸಲು ಸಾಧ್ಯವಿಲ್ಲ ಎಂದಿದ್ದರು.

ಅಬಕಾರಿ ನೀತಿ ಹಗರಣ ಪ್ರಕರಣ ಸಂಬಂಧ ಮಾರ್ಚ್‌ 21ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರ ಬಂಧನವಾಗಿದ್ದು, ಮಾರ್ಚ್ 28ರವರೆಗೆ ಇ.ಡಿ ಕಸ್ಟಡಿಗೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT