ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾರಾಮುಲ್ಲಾದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

Published 19 ಜೂನ್ 2024, 14:24 IST
Last Updated 19 ಜೂನ್ 2024, 14:24 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ. ಈ ಘಟನೆಯಲ್ಲಿ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ವಾಟರ್‌ಗಾಮ್ ಪ್ರದೇಶದಲ್ಲಿ ಉಗ್ರರು ಅಡಗಿರುವ ವಿಷಯ ತಿಳಿದ ನಂತರ, ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿ, ಪ್ರದೇಶವನ್ನು ಸುತ್ತುವರಿದವು. ಈ ವೇಳೆ, ಉಗ್ರರು ಭದ್ರತಾ ಪಡೆಗಳನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಧರು ದಾಳಿ ನಡೆಸಿದಾಗ, ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT