ರಾಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಇಂದು(ಸೋಮವಾರ) ಮುಂಜಾನೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಉಗ್ರರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಗುಂಡಿನ ದಾಳಿ ನಡೆದಿದೆ. ಜಿಲ್ಲೆಯ ಗುಂಧಾ ಪ್ರದೇಶದ ಭದ್ರತಾ ಚೆಕ್ಪೋಸ್ಟ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತಕ್ಷಣ ಎಚ್ಚೆತ್ತ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆದ ಪ್ರದೇಶದ ಸುತ್ತ ಭದ್ರತಾ ಪಡೆಗಳು ಸುತ್ತುವರಿದಿದ್ದು, ಉಗ್ರರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಜಮ್ಮು ವಲಯದ ರಾಜೌರಿ, ಪೂಂಛ್, ರಿಯಾಸಿ, ಡೋಡಾ, ಕಠುವಾ ಜಿಲ್ಲೆಗಳಲ್ಲಿ ಕಳೆದ ಕೆಲವು ತಿಂಗಳಲ್ಲಿ ಸೇನೆ ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ.

ಜಮ್ಮು ವಲಯದ ದಟ್ಟ ಕಾಡಿನಲ್ಲಿ ನೆಲೆಯೂರಿರುವ ಭಯೋತ್ಪಾದಕ ರನ್ನು ಹತ್ತಿಕ್ಕಲು ಹಾಗೂ ಅವರ ಕೃತ್ಯಗಳಿಗೆ ಕಡಿವಾಣ ಹಾಕಲು ಹೆಚ್ಚುವರಿಯಾಗಿ 3,500 ಯೋಧರು, 500 ಅರೆ ಸೇನಾಪಡೆ ಯೋಧರನ್ನು ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.