ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮಾದಲ್ಲಿ ಭದ್ರತಾ ಪಡೆ–ಉಗ್ರರ ನಡುವೆ ಗುಂಡಿನ ಚಕಮಕಿ: ಭಯೋತ್ಪಾದಕನ ಹತ್ಯೆ

Published 1 ಡಿಸೆಂಬರ್ 2023, 5:04 IST
Last Updated 1 ಡಿಸೆಂಬರ್ 2023, 5:04 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುರುವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆಗೈಯಲಾಗಿದೆ ಎಂದು ಭಾರತೀಯ ಸೇನೆ ಶುಕ್ರವಾರ ತಿಳಿಸಿದೆ.

ಗುಪ್ತಚರ ಮಾಹಿತಿ ಮೇರೆಗೆ ನ.30ರ ಮಧ್ಯರಾತ್ರಿ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಪುಲ್ವಾಮಾದ ಅರಿಹಾಲ್ ಗ್ರಾಮದ ಬಳಿ ನಡೆದ ಕಾರ್ಯಾಚರಣೆಯಲ್ಲಿ ಗುರುತು ಪತ್ತೆಯಾಗದ ಉಗ್ರನೊಬ್ಬ ಬಲಿಯಾಗಿದ್ದಾನೆ. ಆತನಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸ್‌ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT