ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರಪ್ರದೇಶವನ್ನು ಲೂಟಿ ಮಾಡುತ್ತಿರುವ ಸಿಎಂ ಜಗನ್ ಮೋಹನ್: ಚಂದ್ರಬಾಬು ನಾಯ್ಡು

Published 13 ಏಪ್ರಿಲ್ 2024, 2:35 IST
Last Updated 13 ಏಪ್ರಿಲ್ 2024, 2:35 IST
ಅಕ್ಷರ ಗಾತ್ರ

ವೇಮುರು (ಆಂಧ್ರಪ್ರದೇಶ): ಮುಖ್ಯಮಂತ್ರಿ ವೈ. ಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರು ಆಂಧ್ರಪ್ರದೇಶವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಟಿಡಿಪಿ ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ಗುಂಟೂರು ಜಿಲ್ಲೆಯ ವೇಮೂರಿನಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಮರಾವತಿಯನ್ನು ರಾಜಧಾನಿಯಾಗಿ ಮಾಡಲು ಸುಮಾರು 29,000 ರೈತರು 35,000 ಎಕರೆ ಭೂಮಿಯನ್ನು ನೀಡಲು ಮುಂದೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ಜಗನ್‌ ನಕಲಿ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೂಲಕ ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ ನಾಯ್ಡು, ರಾಜ್ಯವನ್ನು ಅಭಿವೃದ್ಧಿಪಡಿಸುವ ಅಥವಾ ಹಾಳು ಮಾಡುವ ಸರ್ಕಾರ ಎರಡರಲ್ಲಿ ಯಾವುದು ಬೇಕೆಂದು ಆಯ್ಕೆ ಮಾಡುವಂತೆ ಜನರಲ್ಲಿ ಕೇಳಿದರು.

ಮತ್ತೆ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಯುವಕರಿಗೆ ಉದ್ಯೋಗ ಕಲ್ಪಿಸಲಾಗುವುದು. ಅಲ್ಲದೆ, ಕೃಷ್ಣಾ ನದಿ ಮುಖಜ ಭೂಮಿಗೆ ವರ್ಷದಲ್ಲಿ ಮೂರು ಬೆಳೆ ಬೆಳೆಯಲು ನೀರು ಪೂರೈಸಲು ಕ್ರಮಕೈಗೊಳ್ಳುವುದಾಗಿ ನಾಯ್ಡು ಭರವಸೆ ನೀಡಿದ್ದಾರೆ.

ಆಂಧ್ರಪ್ರದೇಶದ 175 ಸದಸ್ಯ ಬಲದ ವಿಧಾನಸಭೆ ಮತ್ತು 25 ಲೋಕಸಭೆ ಸ್ಥಾನಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT