ನವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ನೂತನ ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ನಡೆಯುವ ಚುನಾವಣೆಗೆ ಮತ ಮೌಲ್ಯಗಳ ಪಟ್ಟಿ (ಮತದಾರರ ಪಟ್ಟಿ) ಅಂತಿಮಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಗುರುವಾರ ತಿಳಿಸಿದೆ.

ಉಪರಾಷ್ಟ್ರಪತಿ ಆಯ್ಕೆ ಚುನಾವಣೆಯ ಮತದಾರರ ಪಟ್ಟಿಯು ರಾಜ್ಯ ಸಭೆಯ ಚುನಾಯಿತ, ನಾಮನಿರ್ದೇಶಿತ ಸದಸ್ಯರು ಹಾಗೂ ಲೋಕಸಭೆಯ ಚುನಾಯಿತ ಸದಸ್ಯರನ್ನು ಒಳಗೊಂಡಿರುತ್ತದೆ.

ಮತದಾರರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಅದನ್ನು, ಶೀಘ್ರದಲ್ಲೇ ಪ್ರಕಟಿಸಲಾಗುವುದು. ಚುನಾವಣಾ ಆಯೋಗದ ಕಚೇರಿಯಲ್ಲಿ ಸ್ಥಾಪಿಸಲಾಗುವ ಕೌಂಟರ್ನಲ್ಲಿ ಮತದಾರರ ಪಟ್ಟಿಯನ್ನು ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಖರೀದಿಸಬಹುದು ಎಂದು ಚುನಾವಣಾ ಆಯೋಗ ಹೇಳಿಕೆ ಬಿಡುಗಡೆ ಮಾಡಿದೆ.

ಧನಕರ್ ಅವರು ಜುಲೈ 21ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಅಧಿಕಾರಾವಧಿ ಇನ್ನೂ ಎರಡು ವರ್ಷವಿತ್ತು.
.ಸಂಪಾದಕೀಯ Podcast | ಧನಕರ್ ದಿಢೀರ್ ರಾಜೀನಾಮೆ; ಪ್ರಶ್ನೆಗಳು ಹಲವು, ಕಾರಣ ನಿಗೂಢ.ಸಂಪಾದಕೀಯ | ಧನಕರ್ ದಿಢೀರ್ ರಾಜೀನಾಮೆ: ಪ್ರಶ್ನೆಗಳು ಹಲವು, ಕಾರಣ ನಿಗೂಢ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.