ಚೆನ್ನೈ: ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಚಿತ್ರೀಕರಣದ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ 28 ವರ್ಷದ ಕಾರ್ಮಿಕರೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕಾರ್ತಿಕೇಯನ್ ಎಂದು ಗುರುತಿಸಲಾಗಿದೆ.

ಚೆನ್ನೈನ ಪಣೈಯೂರ್ನಲ್ಲಿರುವ ಖಾಸಗಿ ಸ್ಟುಡಿಯೊವೊಂದರಲ್ಲಿ ಗುರುವಾರ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಕಲಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕೇಯನ್ ಅವರು ಶೂಟಿಂಗ್ಗಾಗಿ ಮನೆಯಂತಹ ಸೆಟ್ ನಿರ್ಮಿಸುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ನಟ ರಜನಿಕಾಂತ್ ಅವರು ಶೂಟಿಂಗ್ನಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಕಾರ್ಮಿಕನ ಸಾವಿನ ಹಿನ್ನೆಲೆಯಲ್ಲಿ ಅಂದಿನ ಚಿತ್ರೀಕರಣವನ್ನು ತಕ್ಷಣವೇ ರದ್ದುಗೊಳಿಸಲಾಯಿತು. ಕಾನತ್ತೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಪ್ರಕರಣ ದಾಖಲಾಗದಿದ್ದರೂ, ಶಾರ್ಟ್ ಸರ್ಕಿಟ್ ಸಂಬಂಧ ತನಿಖೆ ಮುಂದುವರಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.