ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಪುರ | ಹಿಜಾಬ್‌ಗೆ ಆಕ್ಷೇಪ: ಬಿಜೆಪಿ ಶಾಸಕನ ವಿರುದ್ಧ ಪ್ರತಿಭಟನೆ

Published 29 ಜನವರಿ 2024, 14:16 IST
Last Updated 29 ಜನವರಿ 2024, 14:16 IST
ಅಕ್ಷರ ಗಾತ್ರ

ಜೈಪುರ: ಶಾಲಾ ಕಾರ್ಯಕ್ರಮದಲ್ಲಿ ಬಾಲಕಿಯರು ಹಿಜಾಬ್ ಧರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸರ್ಕಾರಿ ಪ್ರೌಢ ಶಾಲೆಯ ಮುಸ್ಲಿಂ ವಿದ್ಯಾರ್ಥಿನಿಯರು ಇಲ್ಲಿನ ಸುಭಾಷ್ ಚೌಕ್ ಪೊಲೀಸ್ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. 

ಠಾಣೆ ಎದುರಿನ ರಸ್ತೆಯಲ್ಲಿ ಸೇರಿದ್ದ ಹಲವು ವಿದ್ಯಾರ್ಥಿನಿಯರು, ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಅವರು ಕ್ಷಮೆ ಕೋರಬೇಕು. ಅಲ್ಲದೆ, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪಟ್ಟುಹಿಡಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಭಟನಾನಿರತ ವಿದ್ಯಾರ್ಥಿನಿಯರು, ‘ನಮ್ಮ ಶಾಲೆಯ ವಾರ್ಷಿಕ ಕಾರ್ಯಕ್ರಮಕ್ಕೆ ಬಂದಿದ್ದ ಅವರನ್ನು ನಾವು ಸ್ವಾಗತಿಸಿದ್ದೆವು. ಈ ವೇಳೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಹೇಳಿದರು. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಉಸಿರಾಡಲು ಹೇಗೆ ಸಾಧ್ಯ ಎಂದೂ ಕೇಳಿದರು. ಅವರು ಕ್ಷಮೆ ಕೋರಲೇಬೇಕು’ ಎಂದು ಆಗ್ರಹಿಸಿದರು. 

ಈ ವಿಚಾರದ ಕುರಿತು ಕಾಂಗ್ರೆಸ್ ಶಾಸಕ ರಫೀಕ್ ಖಾನ್ ಅವರು ರಾಜ್ಯ ವಿಧಾನಸಭೆಯಲ್ಲಿ ಚರ್ಚಿಸಲು ಯತ್ನಿಸಿದರು. ಆದರೆ, ಇದಕ್ಕೆ ಸ್ಪೀಕರ್ ಅವಕಾಶ ನೀಡಲಿಲ್ಲ. ಜೊತೆಗೆ ಅವರ ಹೇಳಿಕೆಯನ್ನು ಕಡತದಿಂದ ತೆಗೆದುಹಾಕಲಾಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT