ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಘ್ಚಿ ಅವರು ಶುಕ್ರವಾರ ದೆಹಲಿಯಲ್ಲಿ ಸುದೀರ್ಘ ಮಾತುಕತೆ ನಡೆಸಿದರು. ಈ ವೇಳೆ ಪಶ್ಚಿಮ ಏಷ್ಯಾದಲ್ಲಿನ ಪ್ರಸ್ತುತ ಬಿಕ್ಕಟ್ಟು, ಇಂಧನ ಪೂರೈಕೆ ಮೇಲಾಗುತ್ತಿರುವ ಪರಿಣಾಮ ಮತ್ತು ಕಡಲ ಭದ್ರತೆಯ ಕುರಿತು ಉಭಯ ನಾಯಕರು ಗಂಭೀರವಾಗಿ ಚರ್ಚಿಸಿದರು.

ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಅರಾಘ್ಚಿ ಅವರು ಮೂರು ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ.

ಇನ್ನು, ಅರಾಘ್ಚಿ ಅವರೊಂದಿಗೆ ಮಾತುಕತೆಯ ನಂತರ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಜೈಶಂಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಇಂದು ಬೆಳಿಗ್ಗೆ ದೆಹಲಿಯಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರೊಂದಿಗೆ ಸಂಕ್ಷಿಪ್ತವಾದ ಸಂಭಾಷಣೆ ನಡೆಸಿದೆ. ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಅದರ ಪರಿಣಾಮಗಳ ಬಗ್ಗೆ ಚರ್ಚಿಸಲಾಯಿತು. ಇದರ ಜೊತೆಗೆ ಪರಸ್ಪರ ದ್ವಿಪಕ್ಷೀಯ ವಿಷಯಗಳ ಬಗ್ಗೆಯೂ ವಿಚಾರ ವಿನಿಮಯ ಮಾಡಿಕೊಂಡಿದ್ದೇವೆ’ ಎಂದು ತಿಳಿಸಿದ್ದಾರೆ.

ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇರಾನ್ ಸಚಿವರಿಗೆ ಜೈಶಂಕರ್ ಅವರು ಧನ್ಯವಾದ ಅರ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.