ಉಭಯ ದೇಶಗಳ ರಾಜಕೀಯ, ಆರ್ಥಿಕ, ರಕ್ಷಣೆ, ಡಿಜಿಟಲ್, ಸ್ಟಾರ್ಟ್‌ಅಪ್ ಕ್ಷೇತ್ರಗಳಲ್ಲಿ ಸಹಯೋಗ ವೃದ್ಧಿ ಸೇರಿದಂತೆ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಅಲ್ಲದೆ ಇಂಡೊ–ಪೆಸಿಫಿಕ್, ಪಶ್ಚಿಮ ಏಷ್ಯಾ ಮತ್ತು ಉಕ್ರೇನ್ ಕುರಿತ ದೃಷ್ಟಿಕೋನಗಳನ್ನು ಹಂಚಿಕೊಳ್ಳಲಾಯಿತು ಎಂದು ಮಲೇಷ್ಯಾ ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.