ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತತ 2ನೇ ಅವಧಿಗೆ ವಿದೇಶಾಂಗ ಸಚಿವರಾಗಿ ಅಧಿಕಾರ ವಹಿಸಿಕೊಂಡ ಜೈಶಂಕರ್

Published 11 ಜೂನ್ 2024, 5:19 IST
Last Updated 11 ಜೂನ್ 2024, 5:19 IST
ಅಕ್ಷರ ಗಾತ್ರ

ನವದೆಹಲಿ: ರಾಜತಾಂತ್ರಿಕ ನಿಪುಣ ಎಸ್. ಜೈಶಂಕರ್ ಅವರು ಸತತ ಎರಡನೇ ಅವಧಿಗೆ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾರದ ನೂತನ ಸಚಿವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಸಂದರ್ಭದಲ್ಲಿ ಮೋದಿ ಅವರು ಕಳೆದ ಸರ್ಕಾರದಲ್ಲಿ ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯ ಭಾಗವಾಗಿದ್ದ ನಾಲ್ವರ ಖಾತೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಅಮಿತ್‌ ಶಾ (ಗೃಹ), ರಾಜನಾಥ್ ಸಿಂಗ್‌ (ರಕ್ಷಣೆ), ನಿರ್ಮಲಾ ಸೀತಾರಾಮನ್‌ (ಹಣಕಾಸು, ಕಾರ್ಪೊರೇಟ್‌ ವ್ಯವಹಾರ), ಎಸ್‌.ಜೈಶಂಕರ್ (ವಿದೇಶಾಂಗ) ಅದೇ ಖಾತೆಗಳಲ್ಲಿ ಮುಂದುವರಿಯಲಿದ್ದಾರೆ.

'ವಿದೇಶಾಂಗ ವ್ಯವಹಾರಗಳ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು' ಎಂದು ಜೈಶಂಕರ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

2019ರಲ್ಲಿ ಮೋದಿ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಜೈಶಂಕರ್‌ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ, ಅವರು ಗುಜರಾತ್‌ನಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ.

ಜೈಶಂಕರ್ ಅವರು ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ (2015-18), ಯುನೈಟೆಡ್ ಸ್ಟೇಟ್ಸ್ (2013-15), ಚೀನಾ (2009-2013) ಮತ್ತು ಜೆಕ್ ರಿಪಬ್ಲಿಕ್ (2000-2004)ನ ರಾಯಭಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೇ ಸಿಂಗಾಪುರದಲ್ಲಿ (2007-2009) ಭಾರತದ ಹೈಕಮಿಷನರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಜೊತೆಗೆ ಮಾಸ್ಕೋ, ಕೊಲಂಬೊ, ಬುಡಾಪೆಸ್ಟ್ ಮತ್ತು ಟೋಕಿಯೊದಲ್ಲಿನ ರಾಯಭಾರ ಕಚೇರಿಗಳಲ್ಲಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಅಧ್ಯಕ್ಷರ ಸಚಿವಾಲಯದಲ್ಲಿ ಇತರ ರಾಜತಾಂತ್ರಿಕ ಹುದ್ದೆಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT