ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರನಾಥ ಯಾತ್ರೆ: ಯಾತ್ರಾ ಮಾರ್ಗಗಳ ದುರಸ್ತಿ, ಆಗಸ್ಟ್‌ 23ರಿಂದ ತಾತ್ಕಾಲಿಕ ಸ್ಥಗಿತ

Published 20 ಆಗಸ್ಟ್ 2023, 13:08 IST
Last Updated 20 ಆಗಸ್ಟ್ 2023, 13:08 IST
ಅಕ್ಷರ ಗಾತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿರುವ ಅಮರನಾಥ ದೇವಾಲಯಕ್ಕೆ ವಾರ್ಷಿಕ ತೀರ್ಥಯಾತ್ರೆಯನ್ನು ಆಗಸ್ಟ್‌ 23ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.

‘ದೇವಾಲಯಕ್ಕೆ ಬರುವ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದು, ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ) ಯಾತ್ರಾ ಮಾರ್ಗಗಳ ತುರ್ತು ದುರಸ್ತಿ ಮತ್ತು ನಿರ್ವಹಣೆ ಕಾರ್ಯಗಳನ್ನು ಕೈಗೊಂಡಿದೆ. ಆದ್ದರಿಂದ ಯಾತ್ರಾರ್ಥಿಗಳನ್ನು ಸಂಚಾರಕ್ಕೆ ಕರೆದೊಯ್ಯುವುದು ಸೂಕ್ತವಲ್ಲ. ಹೀಗಾಗಿ, ಯಾತ್ರೆಯನ್ನು ಆಗಸ್ಟ್‌ 23ರಿಂದ ಎರಡೂ ಮಾರ್ಗಗಳಲ್ಲಿ (ಅನಂತನಾಗ್‌ನ ಪಹಲ್ಗಾಂ ಮತ್ತು ಗಂದರ್‌ಬಾಲ್ ಜಿಲ್ಲೆಯ ಬಲ್ಟಾಲ್‌) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ’ ಎಂದು ವಕ್ತಾರರು ತಿಳಿಸಿದ್ದಾರೆ.

ಈ ನಡುವೆ, 362 ಯಾತ್ರಾರ್ಥಿಗಳ ಹೊಸ ತಂಡವು ಇಂದು (ಭಾನುವಾರ) ಭಗವತಿ ನಗರದ ಮೂಲ ಶಿಬಿರದಿಂದ 11 ವಾಹನಗಳ ಬೆಂಗಾವಲು ಪಡೆಯೊಂದಿಗೆ ಯಾತ್ರೆಯನ್ನು ಕೈಗೊಳ್ಳಲು ಬಲ್ಟಾಲ್‌ ಬೇಸ್‌ ಕ್ಯಾಂಪ್‌ಗೆ ತೆರಳಿದ್ದಾರೆ ಎಂದು ಅವರು ಹೇಳಿದರು.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.

ಜುಲೈ 1ರಿಂದ ಅಮರನಾಥ ಯಾತ್ರೆ ಆರಂಭವಾದಾಗಿನಿಂದ ಇಲ್ಲಿಯವರೆಗೆ 4 ಲಕ್ಷಕ್ಕೂ ಹೆಚ್ಚು ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT