ಬಿಗಿ ಭದ್ರತೆಯ ನಡುವೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತು.
ಜಮ್ಮು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಮ್ ಲಾಲ್ ಶರ್ಮಾ ಜಮ್ಮುವಿನ ಪುರ್ಖೂ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಚುನಾವಣೆ ನಡೆಯುವ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಅರೆಸೇನೆ ಮತ್ತು ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆನಂದ್ ಜೈನ್ ತಿಳಿಸಿದ್ದಾರೆ.
ಏಳು ಜಿಲ್ಲೆಗಳಲ್ಲಿ 40 ಕ್ಷೇತ್ರಗಳಲ್ಲಿ 39.18 ಲಕ್ಷಕ್ಕೂ ಹೆಚ್ಚು ಅರ್ಹ ಮತದಾರರು ಮತ ಚಲಾಯಿಸಲಿದ್ದಾರೆ. ಇಬ್ಬರು ಮಾಜಿ ಉಪಮುಖ್ಯಮಂತ್ರಿಗಳಾದ ತಾರಾ ಚಂದ್ ಮತ್ತು ಮುಜಾಫರ್ ಬೇಗ್ ಸೇರಿದಂತೆ 415 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಇಂದು ನಿರ್ಧರವಾಗಲಿದೆ.
40 ಕ್ಷೇತ್ರಗಳಲ್ಲಿ ಮತದಾನ ಬಿರುಸುಗೊಂಡಿದೆ. ಎಲ್ಲ ಮತಗಟ್ಟೆಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಮತದಾನದ ಮೊದಲ ಎರಡು ಗಂಟೆಗಳಲ್ಲಿ (ಬೆಳಗ್ಗೆ 9 ಗಂಟೆವರೆಗೂ) ಶೇಕಡಾ 11.60 ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ನಂತರ ಇದೇ ಮೊದಲ ಬಾರಿಗೆ ವಾಲ್ಮೀಕಿ ಸಮುದಾಯದ ಸದಸ್ಯರು ಮಂಗಳವಾರ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕೊನೆಯ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 11 ಗಂಟೆ ವೇಳೆಗೆ ಶೇಕಡ 28ರಷ್ಟು ಮತದಾನವಾಗಿದೆ.