ಶ್ರೀನಗರ: ಹೆಲಿಕಾಪ್ಟರ್ ಪತನದ ದುರಂತದಲ್ಲಿ ಮೃತಪಟ್ಟ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ಸಾವಿಗೆ ಅವಹೇಳನಾಕಾರಿ ಕಾಮೆಂಟ್ ಮಾಡಿದ್ದ ಬ್ಯಾಂಕ್‌ನ ಮಹಿಳಾ ನೌಕರರೊಬ್ಬರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.

ಸರ್ಕಾರಿ ಸ್ವಾಮ್ಯದ ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್‌ನ ಉದ್ಯೋಗಿಯಾಗಿರುವ ಅಫ್ರೀನ್ ಹಸನ್ ನಕಾಶ್ ಅಮಾನತುಗೊಂಡವರು. ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ಅಫ್ರೀನ್, ಫೇಸ್‌ಬುಕ್‌ನಲ್ಲಿ ಬಿಪಿನ್ ರಾವತ್ ಅವರ ಸಾವಿನ ಫೋಸ್ಟ್‌ವೊಂದಕ್ಕೆ ನಗುವ ಎಮೋಜಿ ಹಾಕಿದ್ದರು. ಇದನ್ನು ಗಂಭೀರವಾಗಿರುವ ಪರಿಗಣಿಸಿರುವ ಬ್ಯಾಂಕ್, ಅಫ್ರೀನ್‌ಳ ವಿರುದ್ಧ ಶಿಸ್ತುಕ್ರಮ ಕೈಗೊಂಡಿದೆ.

‘ಸರ್ಕಾರಿ ನೌಕರರು ಸಾಮಾಜಿಕ ಜಾಲತಾಣಗಳ ಬಳಕೆ ಕುರಿತು ಆಗಾಗ್ಗೆ ಸುತ್ತೋಲೆಗಳನ್ನು ಹೊರಡಿಸಿದ್ದರೂ ಮಹಿಳಾ ಸಿಬ್ಬಂದಿಯು ಸಾಮಾಜಿಕ ಜಾಲತಾಣದಲ್ಲಿ ದುರ್ವತನೆ ತೋರಿದ್ದಾರೆ. ಹಾಗಾಗಿ ಶಿಸ್ತುಕ್ರಮವನ್ನು ಕಾಯ್ದಿರಿಸಿ ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ’ ಎಂದು ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್‌ನ ಮಾನವ ಸಂಪನ್ಮೂಲ ವಿಭಾಗವು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.