ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಸೋಮವಾರ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ರೈತರು, ಮಹಿಳೆಯರು, ಯುವಕರ ಅಭಿವೃದ್ಧಿಗೆ ಆದ್ಯತೆ ನೀಡುವ ಭರವಸೆ ನೀಡಿದೆ.
ಪ್ರಾಕೃತಿಕ ವಿಕೋಪಕ್ಕೆ ತುತ್ತಾಗುವ ಎಲ್ಲ ಬೆಳೆಗಳಿಗೂ ವಿಮೆ, ಸೇಬುಹಣ್ಣಿಗೆ ಕನಿಷ್ಠ ₹72 ಬೆಂಬಲ ಬೆಲೆ ಘೋಷಿಸಿರುವುದು ಪ್ರಣಾಳಿಕೆಯ ಪ್ರಮುಖ ಅಂಶಗಳು.
ಪಕ್ಷದ ಕಚೇರಿಯಲ್ಲಿ ಎಐಸಿಸಿ ವಕ್ತಾರ ಪವನ್ ಖೇರಾ, ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಘಟಕದ ಅಧ್ಯಕ್ಷ ತಾರೀಕ್ ಅಹಮದ್ ಅವರು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.
ಪ್ರಣಾಳಿಕೆಯ ಪ್ರಮುಖಾಂಶಗಳು:
ಭೂರಹಿತ ಕುಟುಂಬಗಳಿಗೆ ವಾರ್ಷಿಕ ₹4ಸಾವಿರ ಹೆಚ್ಚುವರಿ ಆರ್ಥಿಕ ನೆರವು
ಭೂರಹಿತರಿಗೆ ರಾಜ್ಯ ಸರ್ಕಾರದ ಭೂಮಿಯನ್ನು 99 ವರ್ಷಗಳಿಗೆ ಗುತ್ತಿಗೆ
ಶೇಕಡಾ 100ರಷ್ಟು ನೀರಾವರಿ ವ್ಯವಸ್ಥೆಗೆ ಆದ್ಯತೆ
ನಿರುದ್ಯೋಗಿ ಯುವಕರಿಗೆ ಮಾಸಿಕ ₹3,500 ಭತ್ಯೆ
1 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ