ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

J&K Elections | ಭಯೋತ್ಪಾದನೆಯನ್ನು ಮಣ್ಣು ಮಾಡಲಾಗಿದೆ, ಮರಳಿ ಬರಲು ಬಿಡೆವು: ಶಾ

Published : 26 ಸೆಪ್ಟೆಂಬರ್ 2024, 10:17 IST
Last Updated : 26 ಸೆಪ್ಟೆಂಬರ್ 2024, 10:17 IST
ಫಾಲೋ ಮಾಡಿ
Comments

ಚೆನಾನಿ (ಜಮ್ಮು ಮತ್ತು ಕಾಶ್ಮೀರ): ಭಯೋತ್ಪಾದನೆಯನ್ನು ಮಣ್ಣು ಮಾಡಲಾಗಿದೆ, ಅದನ್ನು ಮರಳಿ ಬರಲು ಬಿಡೆವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಹೇಳಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಹಾಗೂ ಕಾಂಗ್ರೆಸ್‌ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ‍‍ಪಾಕಿಸ್ತಾನದ ಅಜೆಂಡಾ ಜಾರಿಗೊಳಿಸಲಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಅವಧಿಯಲ್ಲಿ ಭಯೋತ್ಪಾದನೆ ಮುಕ್ತ ವಲಯವನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಇಲ್ಲದೆ ಚುನಾವಣೆ ನಡೆಯುತ್ತಿದೆ. 2019 ಆಗಸ್ಟ್‌ 5ರಂದು 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶ್ಯಾಮ ಪ್ರಸಾದ ಮುಖರ್ಜಿಯವರ ಕನಸು ನನಸಾಗಿಸಿದೆ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹರಡುವವರಿಗೆ ಗಲ್ಲು ಶಿಕ್ಷೆಯ ಮೂಲಕ ಉತ್ತರ ನೀಡಲಾಗುವುದು ಎಂದು ಹೇಳಿದ್ದಾರೆ.

‘ಅಫ್ಜಲ್ ಗುರುವನ್ನು ಗಲ್ಲಿಗೇರಿಸಲಿಲ್ಲವೇ? ಆದರೆ ಎನ್‌ಸಿ ಮತ್ತು ಕಾಂಗ್ರೆಸ್ ಆತನನ್ನು ಗಲ್ಲಿಗೇರಿಸಬಾರದಿತ್ತು ಎಂದು ಹೇಳಿತ್ತು. ಕಲ್ಲೆಸೆಯುವವರನ್ನು ಹಾಗೂ ಭಯೋತ್ಪಾದಕರನ್ನು ಬಿಡುಗಡೆ ಮಾಡಬೇಕು ಎಂದು ಅವರು ಬಯಸುತ್ತಾರೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT