ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯನ್ನು (ಎಲ್ಒಸಿ) ದಾಟಿ ಭಾರತದೊಳಕ್ಕೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಉರಿ ನಾಲಾ ಸ್ಥಳದಲ್ಲಿ ಭಯೋತ್ಪಾದಕರ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಸೇನೆ ಹೇಳಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್/ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ 'ಛಿನಾರ್ ಕಾರ್ಪ್ಸ್' ಪಡೆ, 2025ರ ಏಪ್ರಿಲ್ 23ರಂದು 2–3 ಭಯೋತ್ಪಾದಕರು ಬಾರಾಮುಲ್ಲಾದ ಉರಿ ನಾಲಾ ಪ್ರದೇಶದ ಸರ್ಜೀವನ್ನಲ್ಲಿ ಗಡಿ ನುಸುಳಲು ಯತ್ನಿಸಿದ್ದರು. ಅವರನ್ನು ಎಲ್ಒಸಿ ಬಳಿ ಸೇನಾ ಪಡೆ ಹಿಮ್ಮೆಟ್ಟಿಸಿದ ಪರಿಣಾಮ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದೆ.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಉಗ್ರರು ಮಂಗಳವಾರವಷ್ಟೇ ಭೀಕರ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮವಾಗಿ 28 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ದಾಳಿ ನಡೆದು 24 ಗಂಟೆ ಕಳೆಯುವುದರೊಳಗೆ ಒಳನುಸುಳುವಿಕೆ ಯತ್ನ ನಡೆದಿದೆ.
.ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಸೌದಿ ಪ್ರವಾಸ ಮೊಟಕುಗೊಳಿಸಿ ಮೋದಿ ವಾಪಸ್.ಭಯೋತ್ಪಾದಕ ದಾಳಿ: ಟ್ರಂಪ್, ಪುಟಿನ್, ನೆತನ್ಯಾಹು ಸೇರಿ ಜಾಗತಿಕ ನಾಯಕರ ಖಂಡನೆ.Terror Attack: ಪಹಲ್ಗಾಮ್ ದಾಳಿ ಬೆನ್ನಲ್ಲೇ ದೆಹಲಿಯಲ್ಲಿ ಕಟ್ಟೆಚ್ಚರ.Pahalgam Terror Attack: ಅಮೆರಿಕ, ಪೆರು ಪ್ರವಾಸ ಮೊಟಕುಗೊಳಿಸಿದ ನಿರ್ಮಲಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.