ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ | ಕಂದಕಕ್ಕೆ ಉರುಳಿದ ಕಾರು; 8 ಸಾವು

Last Updated 31 ಆಗಸ್ಟ್ 2022, 3:22 IST
ಅಕ್ಷರ ಗಾತ್ರ

ಕಿಶ್ತ್‌ವಾರ್: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್ ಜಿಲ್ಲೆಯಲ್ಲಿ ರಸ್ತೆಯಿಂದ ಸ್ಕಿಡ್ ಆದ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದು ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಬಾಲಕಿ ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಕಿಶ್ತ್‌ವಾರ್ ಉಪ ಆಯುಕ್ತ (ಡಿಸಿ) ದೇವಾಂಶ್ ಯಾದವ್ ತಿಳಿಸಿದ್ದಾರೆ.

ಜಮ್ಮುವಿನ ಕಿಶ್ತ್‌ವಾರ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಗಳಿಗೆ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಟ್ವೀಟ್ ತಿಳಿಸಿದೆ.

ಕಾರು ಚಿಂಗಮ್‌ನಿಂದ ಚತ್ರೂಗೆ ಸಂಚರಿಸುತ್ತಿತ್ತು. ಬುಂದಾ ಗ್ರಾಮದ ಬಳಿಕ ಅಪಘಾತ ಸಂಭವಿಸಿದ್ದು, ರಸ್ತೆಯಿಂದ ಸ್ಕಿಡ್ ಆದ ಕಾರು ಸುಮಾರು 300 ಅಡಿ ಆಳದ ಕಂದಕಕ್ಕೆ ಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT