ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿರುವ ಗಡಿ ನಿಯಂತ್ರಣ ರೇಖೆಯನ್ನು ದಾಟಿದ ಪಾಕಿಸ್ತಾನ ನುಸುಳುಕೋರನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ ನಡೆಯುತ್ತಿರುವ ಹೊತ್ತಿನಲ್ಲೇ ಈ ಪ್ರಕರಣ ವರದಿಯಾಗಿದೆ.

ಬಂಧಿತನನ್ನು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ತೆತ್ರಿನೋತ್ ಗ್ರಾಮದ ನಿವಾಸಿ ಮೊಹಮ್ಮದ್ ಯಾಸಿರ್ ಫೈಜ್ ಎಂದು ಗುರುತಿಸಲಾಗಿದೆ. ಆತನನ್ನು, ಸಲೋತ್ರಿ ಗಡಿ ಗ್ರಾಮದಲ್ಲಿ ಶನಿವಾರ ರಾತ್ರಿ 11.30ರ ಸುಮಾರಿಗೆ ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಫೈಜ್ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದಾನೆ. ವಿಚಾರಣೆ ಸಲುವಾಗಿ ಆತನನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
.Republic Day Parade 2025: ಈ ವರ್ಷದ ಗಣರಾಜ್ಯೋತ್ಸವ ಪಥಸಂಚಲನ ಹೇಗಿರಲಿದೆ? .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.