ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Jammu & Kashmir polls: ಕಾಂಗ್ರೆಸ್‌ನಿಂದ 9 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Published : 27 ಆಗಸ್ಟ್ 2024, 2:08 IST
Last Updated : 27 ಆಗಸ್ಟ್ 2024, 2:08 IST
ಫಾಲೋ ಮಾಡಿ
Comments

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಒಂಬತ್ತು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ದೋರು ಕ್ಷೇತ್ರದಿಂದ ಪಕ್ಷದ ಪ್ರಧಾನ ಕಾರ್ಯದರ್ಶಿ ಗುಲಾಮ್ ಅಹ್ಮದ್ ಮಿರ್ ಮತ್ತು ಬನಿಹಾಲ್‌ನಿಂದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ವಿಕಾರ್ ರಸೂಲ್ ವಾನಿ ಅವರನ್ನು ಕಣಕ್ಕಿಳಿಸಿದೆ.

ಮಿತ್ರಪಕ್ಷ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಜೊತೆ ಸೀಟು ಹಂಚಿಕೆ ಸಂಬಂಧ ಒಪ್ಪಂದದ ಮಾತುಕತೆ ಬಳಿಕ ಈ ಘೋಷಣೆಯಾಗಿದೆ. ಎನ್‌ಸಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಘೋಷಿಸಲಾಯಿತು.

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಎನ್‌ಸಿ ಹಾಗೂ ಕಾಂಗ್ರೆಸ್ ಅನುಕ್ರಮವಾಗಿ 51 ಹಾಗೂ 32 ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಂದ ಮಾಡಿಕೊಂಡಿವೆ.

ಸಿಪಿಐ(ಎಂ) ಮತ್ತು ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಪ್ಯಾಂಥರ್ಸ್ ಪಾರ್ಟಿ (ಜೆಕೆಎನ್‌ಪಿಪಿ)ಗೆ ತಲಾ ಒಂದು ಸ್ಥಾನವನ್ನು ನೀಡಲಾಗಿದೆ. ಐದು ಕ್ಷೇತ್ರಗಳಲ್ಲಿ ಸೌಹಾರ್ದ ಸ್ಪರ್ಧೆ ನಡೆಯಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18ರಂದು ಮೊದಲ ಹಂತ, ಸೆ.25ರಂದು ಎರಡನೇ ಹಂತ ಮತ್ತು ಅಕ್ಟೋಬರ್ 01ರಂದು ಮೂರನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT