ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ ಬಿಜೆಪಿಯ ಪ್ರಯೋಗಾಲಯ: ಮೆಹಬೂಬಾ ಮುಫ್ತಿ

Published 24 ಜೂನ್ 2023, 23:30 IST
Last Updated 24 ಜೂನ್ 2023, 23:30 IST
ಅಕ್ಷರ ಗಾತ್ರ

ಪಟ್ನಾ: ‘ಜಮ್ಮು ಮತ್ತು ಕಾಶ್ಮೀರವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಯೋಗಾಲಯವಾಗಿದೆ’ ಎಂದು ಪೀಪಲ್ಸ್‌ ಡೆಮಾಕ್ರಟಿಕ್‌ ಪಕ್ಷದ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಶನಿವಾರ ಅಸಮಾಧಾನ ವ್ಯಕ್ತಪಡಿಸಿದರು.

ವಿರೋಧ ಪಕ್ಷಗಳ ಸಭೆ ನಡೆದ ಒಂದು ದಿನದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಸ್ತವದಲ್ಲಿ ಭಾರತದ ಕಲ್ಪನೆಯ ಮೇಲೆ ದಾಳಿ ನಡೆಯುತ್ತಿದೆ. ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿಯನ್ನು ರದ್ದುಪಡಿಸಿದಾಗ, ಅಲ್ಲಿನ ಮೂವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಹಲವು ನಾಯಕರನ್ನು ಜೈಲಿಗಟ್ಟಿತು’ ಎಂದು ಅವರು ತಿಳಿಸಿದರು.

‘ಸುಗ್ರೀವಾಜ್ಞೆಯನ್ನು ಹೊಡಿಸುವ ಮೂಲಕ ಕೇಂದ್ರವು ದೆಹಲಿಯಲ್ಲಿ ಯಾವ ಪರಿಸ್ಥಿತಿಯನ್ನು ಸೃಷ್ಟಿಸಿದೆಯೋ ಅಂಥದ್ದೇ ಪರಿಸ್ಥಿತಿ ಬಹಳ ಹಿಂದೆಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗಿತ್ತು. ಆದರೆ ಕೆಲವರಿಗೆ ಇದು ತಡವಾಗಿ ಅರ್ಥವಾಗಿದೆ. ಒಂದು ವೇಳೆ 2024ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದರೆ, ಅದು ಸಂವಿಧಾನವನ್ನು ಧ್ವಂಸಗೊಳಿಸುತ್ತದೆ ಹಾಗೂ ಇಡೀ ದೇಶವನ್ನೇ ಕಾಶ್ಮೀರಿಕರಣ ಮಾಡುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT