ಮಂಗಳವಾರ, 28 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರದ ಬಾರಾಮುಲ್ಲದಲ್ಲಿ ಎನ್‌ಕೌಂಟರ್: ಪಾಕ್ ಉಗ್ರನ ಹತ್ಯೆ

Last Updated 7 ಜೂನ್ 2022, 3:05 IST
ಅಕ್ಷರ ಗಾತ್ರ

ಕಾಶ್ಮೀರ: ಜಮ್ಮು–ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳು ಸೋಮವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್‌–ಇ ತಯ್ಯಬಾ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೊಪೋರೆಯ ಝಲೂರಾ ಪ್ರದೇಶದಲ್ಲಿನ ಪಾನಿಪೊರಾ ಕಾಡಿನಲ್ಲಿ ಉಗ್ರರು ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿ ದೊರೆತಿತ್ತು.

ಅದರಂತೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಆ ಸಂದರ್ಭದಲ್ಲಿ ಉಗ್ರರು ಗುಂಡು ಹಾರಿಸಿದ್ದರು.

ಅದಕ್ಕೆ ಪ್ರತ್ಯುತ್ತರವಾಗಿ ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಉಳಿದ ಮೂವರು ಉಗ್ರರು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ಉಗ್ರ ಪಾಕಿಸ್ತಾನಕ್ಕೆ ಸೇರಿದವನು ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT