ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನ ಉದ್ಘಾಟಿಸಿದ ಲೆ. ಗವರ್ನರ್

Published 8 ಜೂನ್ 2023, 6:25 IST
Last Updated 8 ಜೂನ್ 2023, 6:25 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮುವಿನ ಸಿಧ್ರಾದಲ್ಲಿ ನಿರ್ಮಾಣಗೊಂಡಿರುವ ತಿರುಪತಿ ಬಾಲಾಜಿ ದೇವಸ್ಥಾನವನ್ನು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಉದ್ಘಾಟಿಸಿದರು.

ಈ ದೇವಾಲಯವನ್ನು 62 ಎಕರೆ ಪ್ರದೇಶದಲ್ಲಿ ₹25 ಕೋಟಿ ವೆಚ್ಚದಲ್ಲಿ ಕೇವಲ ಎರಡು ವರ್ಷಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಯಾತ್ರಾರ್ಥಿಗಳ ವಿಶ್ರಾಂತಿ ಕೊಠಡಿಗಳು, ವೇದ ಪಾಠಶಾಲೆ, ಕಲ್ಯಾಣ ಮಂಟಪ, ವಾಹನ ಮಂಟಪ ಮುಂತಾದ ಸೌಲಭ್ಯಗಳು ದೇವಾಲಯದಲ್ಲಿ ಕಾಂಪ್ಲೆಕ್ಸ್‌ನಲ್ಲಿವೆ.

40 ವರ್ಷಕ್ಕೆ ಗುತ್ತಿಗೆ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಟಿಟಿಡಿಗೆ ಭೂಮಿಯನ್ನು ಮಂಜೂರು ಮಾಡಿತ್ತು.

2021ರ ಜೂನ್ 13ರಂದು ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT