ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಕಾಶ್ಮೀರ ನ್ಯಾಷನಲ್‌ ಫ್ರಂಟ್‌ ಸಂಘಟನೆಗೆ ಐದು ವರ್ಷ ನಿಷೇಧ: ಕೇಂದ್ರ

Published 12 ಮಾರ್ಚ್ 2024, 16:24 IST
Last Updated 12 ಮಾರ್ಚ್ 2024, 16:24 IST
ಅಕ್ಷರ ಗಾತ್ರ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ನಯೀಮ್‌ ಅಹಮದ್‌ ಖಾನ್‌ ನೇತೃತ್ವದ ‘ಜಮ್ಮು ಕಾಶ್ಮೀರ ನ್ಯಾಷನಲ್‌ ಫ್ರಂಟ್‌’ (JKNF )ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಗೃಹ ಸಚಿವಾಲಯ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ‘ತಕ್ಷಣವೇ ಜಾರಿಗೆ ಬರುವಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ JKNF ಅನ್ನು  ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗುತ್ತದೆ. ಇದು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಪೂರ್ವಾಗ್ರಹ ಪೀಡಿತವಾದ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದೆ’ ಎಂದು ಹೇಳಿದೆ.

ಪ್ರತ್ಯೇಕತಾವಾದವನ್ನು ಉತ್ತೇಜಿಸಲು ಭಾರತ ವಿರೋಧಿ ಪ್ರಚಾರ ಮಾಡುವ ಮತ್ತು ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದೆ. ಹೀಗಾಗಿ ಸಂಘಟನೆಯನ್ನು ನಿಷೇಧಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. 

ಭಾರತದ ಜನರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಭಯೋತ್ಪಾದಕ ಶಕ್ತಿಗಳನ್ನು ಬೇರುಸಹಿತ ಕಿತ್ತೊಗೆಯಲು ಬದ್ಧರಾಗಿದ್ದೇವೆ ಎಂದು ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT