ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಂಚಾಯಿತಿಗಳಲ್ಲಿ ಖಾಲಿ ಉಳಿದಿರುವ 12,650 ಸ್ಥಾನಗಳಿಗೆ ಮಾರ್ಚ್ 5ರಿಂದ ಎಂಟು ಹಂತಗಳಲ್ಲಿ ಉಪಚುನಾವಣೆ ನಡೆಯಲಿದೆ.

‘ಮಾರ್ಚ್ 5ರಿಂದ 20ರವರೆಗೆ ಎಂಟು ಹಂತಗಳಲ್ಲಿ ಮತದಾನ ನಡೆಯಲಿದೆ. ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು’ ಎಂದು ಕೇಂದ್ರಾಡಳಿತ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಶೈಲೆಂದ್ರ ಕುಮಾರ್ ಅವರು ಗುರುವಾರ ತಿಳಿಸಿದರು.

‘ಮತದಾನ ಪ್ರಕ್ರಿಯೆಯಲ್ಲಿ ಇವಿಎಂ ಬದಲಿಗೆ ಮತಪತ್ರಗಳನ್ನು ಬಳಸಲಾಗುವುದು. 11,639 ಪಂಚ (ಸದಸ್ಯರ ಸ್ಥಾನ) ಹಾಗೂ 1,011 ಸರಪಂಚ (ಅಧ್ಯಕ್ಷ) ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿ, ರಾಜ್ಯದ ಮರು ವಿಂಗಡಣೆ ಮಾಡಿದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. 2018ರ ನವೆಂಬರ್– ಡಿಸೆಂಬರ್‌ನಲ್ಲಿ ರಾಜ್ಯದ 22,214 ಪಂಚ ಹಾಗೂ 3,458 ಸರಪಂಚ ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.