ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಪರಿಶೀಲನೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕೇಂದ್ರಾಡಳಿತ ಪ್ರದೇಶದಾದ್ಯಂತ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಮಪಾತದ ವೇಳೆ ಗಡಿಯಲ್ಲಿ ಭಯೋತ್ಪಾದಕರು ನುಸುಳುವ ಸಾಧ್ಯತೆಗಳಿರುವುದರಿಂದ ಕಟ್ಟೆಚ್ಚರವಹಿಸಬೇಕು ಎಂದು ನಿರ್ದೇಶನ ನೀಡಿದರು.

ಈ ಬಗ್ಗೆ ಎಕ್ಸ್ ಮಾಡಿರುವ ಅಮಿತ್ ಶಾ, ‘ಲೆಫ್ಟಿನೆಂಟ್ ಗವರ್ನರ್ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಜಮ್ಮು ಮತ್ತು ಕಾಶ್ಮೀರದ ಭದ್ರತೆಯ ಬಗ್ಗೆ ಪರಿಶೀಲಿಸಿದೆ. ಈ ಪ್ರದೇಶದಲ್ಲಿನ ಭಯೋತ್ಪಾದಕ ವ್ಯವಸ್ಥೆಯನ್ನು ದುರ್ಬಲಗೊಳಿಸಲು ನಾವು ಬದ್ಧರಾಗಿದ್ದೇವೆ. ಶಾಂತಿ ಮತ್ತು ಭದ್ರತೆಗೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ತಡೆಯುವ ಸಂಪೂರ್ಣ ಸ್ವಾತಂತ್ರ್ಯ ನಮ್ಮ ಭದ್ರತಾ ಪಡೆಗಳಿಗಿದೆ’ ಎಂದು ಹೇಳಿದ್ದಾರೆ.

‘ಭಯೋತ್ಪಾದನೆ ಮುಕ್ತ ಜಮ್ಮು ಮತ್ತು ಕಾಶ್ಮೀರ ಎಂಬ ಮೋದಿ ಅವರ ದೂರದೃಷ್ಟಿಯನ್ನು ಸಾಧಿಸಲು ಹೆಚ್ಚಿನ ಜಾಗರೂಕತೆಯಿಂದ ಇರಲು ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡಲು ನಿರ್ದೇಶಿಸಿದೆ. ಭದ್ರತಾ ಪಡೆಗಳ ಪ್ರಯತ್ನದಿಂದ ಪ್ರದೇಶದಲ್ಲಿ ಭಯೋತ್ಪಾದನಾ ಜಾಲವು ದುರ್ಬಲಗೊಂಡಿದೆ’ ಎಂದು ಅವರು ಹೇಳಿದ್ದಾರೆ.

ಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಗುಪ್ತಚರ ಇಲಾಖೆಯ ನಿರ್ದೇಶಕ ತಪನ್ ದೇಕ, ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ನಳಿನ್ ಪ್ರಭಾತ್, ಸಿಆರ್ಪಿಎಫ್ ಪ್ರಧಾನ ನಿರ್ದೇಶಕ ಜಿ.ಪಿ.ಸಿಂಗ್ ಮತ್ತು ಬಿಎಸ್ಎಫ್ ಪ್ರಧಾನ ನಿರ್ದೇಶಕ ದಲ್ಜಿತ್ ಸಿಂಗ್ ಚೌಧರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.