ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಳಿಗ್ಗೆ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಢೋಬಾಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿದರು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ದಕ್ಷಿಣ ಕಾಶ್ಮೀರದ ಪಹಲ್ಗಾಮ್ನ ಪ್ರಮುಖ ಪ್ರವಾಸಿ ತಾಣದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಕನಿಷ್ಠ 28 ಜನರನ್ನು ಕೊಂದಿದ್ದಾರೆ. ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.Terror Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: 28 ಮಂದಿ ಸಾವು.ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಸೌದಿ ಪ್ರವಾಸ ಮೊಟಕುಗೊಳಿಸಿ ಮೋದಿ ವಾಪಸ್.
ಮೃತ 28 ಜನರಲ್ಲಿ ಯುಎಇ ಮತ್ತು ನೇಪಾಳದ ಇಬ್ಬರು ವಿದೇಶಿಯರು, ಇಬ್ಬರು ಸ್ಥಳೀಯ ನಿವಾಸಿಗಳೂ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೋದಿ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಹಿಂತಿರುಗಿದರು,

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಮಂಗಳವಾರ ರಾತ್ರಿ ಭಾರತಕ್ಕೆ ವಾಪಸ್ ಆದರು. ನಿಗದಿತ ವೇಳಾಪಟ್ಟಿಯಂತೆ ಮೋದಿ ಬುಧವಾರ ರಾತ್ರಿ ನವದೆಹಲಿಗೆ ಮರಳಬೇಕಿತ್ತು. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ ಅವರು ಮುಂಚಿತವಾಗಿ ದೇಶಕ್ಕೆ ವಾಪಸ್ ಆಗಿದ್ದಾರೆ.

ಈ ನಡುವೆ, ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ ಭೀಕರ ದಾಳಿಯ ನಂತರ ಭದ್ರತಾ ಕ್ರಮಗಳನ್ನು ಮುನ್ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ. ಅವರು ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.