ಬಿಟ್ಕಾಯಿನ್ ಪ್ರಕರಣ: ನಲಪಾಡ್ ಹ್ಯಾರಿಸ್ ಮನೆ ಸೇರಿ 17 ಕಡೆ ಇ.ಡಿ ದಾಳಿ, ಜಪಾನ್ನಲ್ಲಿ ಭೂಕಂಪನ ಸೇರಿ ಈ ದಿನದ ಪ್ರಮುಖ ಸುದ್ದಿಗಳು

ಟೋಕಿಯೊ: ಜಪಾನ್ನ ಈಶಾನ್ಯ ಕರಾವಳಿಯಲ್ಲಿ ಸೋಮವಾರ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.

ಇದರ ಬೆನ್ನಲ್ಲೇ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ನವದೆಹಲಿ: ಸುಪ್ರೀಂ ಕೋರ್ಟ್ನ ಆದೇಶದಂತೆ ಮತದಾರರ ಪಟ್ಟಿಯ ವಿಶೇಷ ಪರಷ್ಕರಣೆ (ಎಸ್ಐಆರ್ ) ಮೇಲ್ಮನವಿ ನ್ಯಾಯಮಂಡಳಿಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ವಕೀಲರೊಬ್ಬರು ಪ್ರತಿಪಾದಿಸಿದ್ದು, ಈ ಕುರಿತು ಕಲ್ಕತ್ತ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಂದ ವರದಿ ಕೋರಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಹೈದ್ರಾಬಾದ್ನಿಂದ ಹುಬ್ಬಳ್ಳಿಗೆ ಭಾನುವಾರ ಮಧ್ಯಾಹ್ನ ಹೊರಟಿದ್ದ ಫ್ಲೈ91 ವಿಮಾನವು ಹವಾಮಾನ ವೈಪರಿತ್ಯದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗದೆ ಬಾನಂಗಳದಲ್ಲಿಯೇ ಮೂರು ಗಂಟೆಗೂ ಹೆಚ್ಚುಕಾಲ ಹಾರಾಡಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ತೂತುಕುಡಿ: 'ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ದೇಶಕ್ಕೆ ಭೇಟಿ ಕೊಟ್ಟಿದ್ದರು' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ನವದೆಹಲಿ: ಭಾರತವು ಈಗ 'ವಿಶ್ವಗುರು' ಆಗಿ ಉಳಿದಿಲ್ಲ. ಆ ಪದವನ್ನು ಬಳಸಬಾರದು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಸೋಮವಾರ ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಹಾವೇರಿ: ಇಲ್ಲಿಯ ನಗರಸಭೆ ಬಳಿ ಪ್ರತಿಷ್ಠಾಪಿಸಿದ್ದ ಮಹಾತ್ಮ ಗಾಂಧೀಜಿ ಪುತ್ಥಳಿಯು ಭಗ್ನಗೊಂಡು ಬಿದ್ದಿದ್ದು, ಈ ಬಗ್ಗೆ ಶಹರ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಬಿಟ್ಕಾಯಿನ್ ಅಕ್ರಮ ವಹಿವಾಟು ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ್ ಉರುಫ್ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿರುವ ಕಾರಣಕ್ಕೆ ಕಾಂಗ್ರೆಸ್ನ ಯುವ ಮುಖಂಡ ಮಹಮದ್ ನಲಪಾಡ್ ಹ್ಯಾರಿಸ್ ಮನೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಚಂಡೀಗಢ: 2027ರ ವಿಧಾನಸಭಾ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್ಪಿ) ಪಕ್ಷವು ಮತ್ತೆ ಅಧಿಕಾರಕ್ಕೆ ಬರಲಿದೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ನಮ್ಮೊಂದಿಗಿರುತ್ತದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸಾರಿಗೆ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ: ‘ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭೇಟಿಯಲ್ಲಿ ಯಾವುದೇ ರಾಜಕೀಯ ವಿಶೇಷತೆ ಇಲ್ಲ. ಪಕ್ಷದ ಸಂಘಟನೆ ಮತ್ತು ಸರ್ಕಾರದ ಕೆಲಸಗಳ ಬಗ್ಗೆ ಚರ್ಚಿಸಲು ಭೇಟಿಯಾಗುವುದು ಸಹಜ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.