ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಾಠ ಮೀಸಲಾತಿ: 17ಕ್ಕೆ ಸಭೆ

Published 14 ಡಿಸೆಂಬರ್ 2023, 16:04 IST
Last Updated 14 ಡಿಸೆಂಬರ್ 2023, 16:04 IST
ಅಕ್ಷರ ಗಾತ್ರ

ಛತ್ರಪತಿ ಸಂಭಾಜಿನಗರ: ಮರಾಠ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿದ್ದು, ನಮ್ಮ ಮುಂದಿನ ಹೋರಾಟದ ರೂಪುರೇಷೆ ರೂಪಿಸಲು ಸಮುದಾಯವು ಡಿಸೆಂಬರ್‌ 17ರಂದು ಸಭೆ ನಡೆಸಲಿದೆ ಎಂದು ಹೋರಾಟಗಾರ ಮನೋಜ್‌ ಜರಾಂಗೆ ತಿಳಿಸಿದರು. 

ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜರಾಂಗೆ, ‘ಮರಾಠರಿಗೆ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ಡಿಸೆಂಬರ್‌ 24ರವರಗೆ ಗಡುವು ನೀಡಿದ್ದು, ಆ ಬಳಿಕವೇ ಸಭೆ ನಡೆಸಬೇಕೆಂದು ನಾವು ತೀರ್ಮಾನಿಸಿದ್ದೇವು. ಆದರೆ, ಕೆಲವು ಬೆಳವಣಿಗೆಗಳಿಂದಾಗಿ, ಡಿಸೆಂಬರ್‌ 17ರಂದೇ ಸಭೆ ನಡೆಸಲು ತೀರ್ಮಾನಿಸಿದ್ದೇವೆ’ ಎಂದು ಹೇಳಿದರು.

‘ಅಂತರ್ವಲಿ ಸರತಿ ಗ್ರಾಮದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ, ಬಂಧಿತರ ಮೇಲಿನ ಪ್ರಕರಣಗಳನ್ನು ಕೈಬಿಡುವುದಾಗಿ ಸರ್ಕಾರ ತಿಳಿಸಿತ್ತು. ಆದರೆ, ಸಚಿವ ಛಗನ್‌ ಭುಜಬಲ್‌ ಅವರ ಹೇಳಿಕೆಯ ಬಳಿಕ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿದೆ’ ಎಂದು ತಿಳಿಸಿದರು.

‘ಸರ್ಕಾರ ಈವರೆಗೆ ಮರಾಠ ಮೀಸಲಾತಿಯ ಬಗ್ಗೆ ಯಾವುದೇ ಲಿಖಿತ ಹೇಳಿಕೆಯನ್ನು ನೀಡಿಲ್ಲ. ಹಿಂಸಾಚಾರದ ಬಗ್ಗೆ ಮಾತನಾಡಿದ್ದು ಭುಜಬಲ ಅವರು, ಆದರೆ, ನಮ್ಮ ಮೇಲೆ ಕ್ರಮಕೈಗೊಳ್ಳಲಾಗಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT