ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಲ್‌ಡಿ ‘ಇಂಡಿಯಾ’ ತೊರೆಯುವುದಿಲ್ಲ: ಶಿವಪಾಲ್ ಯಾದವ್

Published 7 ಫೆಬ್ರುವರಿ 2024, 11:32 IST
Last Updated 7 ಫೆಬ್ರುವರಿ 2024, 11:32 IST
ಅಕ್ಷರ ಗಾತ್ರ

ಲಖನೌ: ‘ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಪಕ್ಷದ ಮುಖ್ಯಸ್ಥ ಜಯಂತ ಚೌಧರಿ ಅವರು ‘ಇಂಡಿಯಾ’ ಮೈತ್ರಿಕೂಟದೊಂದಿಗೆ ಇರುತ್ತಾರೆ. ಈ ವಿಚಾರವಾಗಿ ಬಿಜೆಪಿ ಗೊಂದಲ ಸೃಷ್ಟಿಸುವ ಕಾರ್ಯ ಮಾಡುತ್ತಿದೆ’ ಎಂದು ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಶಿವಪಾಲ್‌ ಸಿಂಗ್ ಯಾದವ್ ಬುಧವಾರ ಹೇಳಿದ್ದಾರೆ. 

ಚೌಧರಿ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಶಿವಪಾಲ್‌ ಸಿಂಗ್‌ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಕೂಡ ಇದೇ ರೀತಿಯ ಹೇಳಿಕೆ ನೀಡಿದ್ದಾರೆ.

‘ಉತ್ತರ ಪ್ರದೇಶದ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋರಾಟವನ್ನು ಜಯಂತ ಚೌಧರಿ ದುರ್ಬಲಗೊಳಿಸುವುದಿಲ್ಲ ಎಂಬ ವಿಶ್ವಾಸ ಇದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT