ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ಲೋಕಸಭೆ ಚುನಾವಣೆ– 16 ಅಭ್ಯರ್ಥಿಗಳನ್ನು ಘೋಷಿಸಿದ ಜೆಡಿಯು

Published 24 ಮಾರ್ಚ್ 2024, 15:53 IST
Last Updated 24 ಮಾರ್ಚ್ 2024, 15:53 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ಭಾನುವಾರ 16 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಪಕ್ಷದ ಮತಬ್ಯಾಂಕ್ ಆಗಿರುವ ಹಿಂದುಳಿದ ಮತ್ತು ಅತಿ ಹಿಂದುಳಿದ ಜಾತಿಗಳ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯಲ್ಲಿ ಪ್ರಾಶಸ್ತ್ಯ ನೀಡಲಾಗಿದೆ. 

ಜೆಡಿಯು ಕಚೇರಿಯಲ್ಲಿ ಪಕ್ಷದ ಉಪಾಧ್ಯಕ್ಷ ವಸಿಷ್ಠ ನಾರಾಯಣ ಸಿಂಗ್ ಮತ್ತು ಸಂಜಯ್ ಕುಮಾರ್ ಝಾ ಸಮ್ಮುಖದಲ್ಲಿ ಪಟ್ಟಿ ಬಿಡುಗಡೆ ಮಾಡಲಾಯಿತು. ಪಕ್ಷದ ಹಾಲಿ 12 ಸಂಸದರಿಗೆ ಅವರ ಕ್ಷೇತ್ರಗಳಿಂದಲೇ ಸ್ಪರ್ಧಿಸುವ ಅವಕಾಶ ಕಲ್ಪಿಸಲಾಗಿದೆ.

‘ಎಲ್ಲ ಅಭ್ಯರ್ಥಿಗಳನ್ನು ಪಕ್ಷದ ಅಧ್ಯಕ್ಷರೂ ಆದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ನಿರ್ಧರಿಸಿದ್ದಾರೆ. 6 ಹಿಂದುಳಿದ, 5 ಅತಿ ಹಿಂದುಳಿದ, ಒಬ್ಬ ದಲಿತ, ಒಬ್ಬ ಮುಸ್ಲಿಂ, ಇಬ್ಬರು ಮಹಿಳೆಯರು ಮತ್ತು ಪ್ರಬಲ ಸಮುದಾಯದ 3 ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಸಮಾಜದ ಎಲ್ಲ ವರ್ಗಗಳಿಗೂ ಸೂಕ್ತ ಪ್ರಾತಿನಿಧ್ಯ ಸಿಗುವಂತೆ ಎಚ್ಚರಿಕೆ ವಹಿಸಲಾಗಿದೆ’ ಎಂದು ಸಂಜಯ್ ಕುಮಾರ್ ಝಾ ತಿಳಿಸಿದರು.   

ಬಿಹಾರದ ಆರು ಮೀಸಲು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ (ಗೋಪಾಲಗಂಜ್‌) ಜೆಡಿಯು ಸ್ಪರ್ಧಿಸುತ್ತಿದ್ದು, ಹಾಲಿ ಸಂಸದ ಅಲೋಕ್ ಸುಮನ್ ಅಲ್ಲಿ ಮರು ಆಯ್ಕೆ ಬಯಸಿದ್ದಾರೆ.

ಬಿಹಾರದ 40 ಲೋಕಸಭಾ ಸ್ಥಾನಗಳನ್ನು ಜೆಡಿಯು, ಎನ್‌ಡಿಎ ಜತೆಗೆ ಹಂಚಿಕೊಂಡಿದೆ. ಮೈತ್ರಿ ಒಪ್ಪಂದದ ಪ್ರಕಾರ, ಜೆಡಿಯುಗೆ 16 ಸ್ಥಾನಗಳನ್ನು ಬಿಟ್ಟುಕೊಡಲಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಯು 17 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ಬಿಎಸ್‌ಪಿ: 25 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲಖನೌ: ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಲೋಕಸಭಾ ಚುನಾವಣೆಗಾಗಿ ಭಾನುವಾರ ಎರಡು ಪ್ರತ್ಯೇಕ ಪಟ್ಟಿಗಳಲ್ಲಿ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 25 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.  ಮಾಯಾವತಿ ನೇತೃತ್ವದ ಪಕ್ಷವು ಮೊದಲು 16 ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿಗಳನ್ನೇ ಅಭ್ಯರ್ಥಿಗಳನ್ನಾಗಿ ಘೋಷಿಸಿತು. ನಂತರ ಉಳಿದ 9 ಕ್ಷೇತ್ರಗಳಿಗೆ ಉಮೇದುವಾರರ ಹೆಸರುಗಳನ್ನು ಪ್ರಕಟಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT