ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರ: ಜೆಡಿಯು ಕಾರ್ಯಕಾರಿ ಅಧ್ಯಕ್ಷರಾಗಿ ಸಂಜಯ್‌ ಝಾ ನೇಮಕ

Published 29 ಜೂನ್ 2024, 13:10 IST
Last Updated 29 ಜೂನ್ 2024, 13:10 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಸಭೆ ಸದಸ್ಯ ಸಂಜಯ್‌ ಝಾ ಅವರನ್ನು ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ಜೆಡಿಯು ಶನಿವಾರ ನೇಮಿಸಿದೆ.

ದೆಹಲಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಬಿಜೆಪಿ ನಾಯಕರ ಜೊತೆ ಸಂಜಯ್‌ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅಲ್ಲದೇ ಅವರು ರಾಜ್ಯಸಭೆಯಲ್ಲಿ ಜೆಡಿಯು ನಾಯಕರಾಗಿದ್ದಾರೆ. ಈ ನಿಟ್ಟಿನಲ್ಲಿ ಅವರ ಆಯ್ಕೆಯು ಮಹತ್ವ ಪಡೆದಿದೆ. 

ಬಿಹಾರಕ್ಕೆ ವಿಶೇಷ ವರ್ಗ ಸ್ಥಾನಮಾನ ನೀಡುವ ತನ್ನ ಒತ್ತಾಯವನ್ನು ಸಭೆಯಲ್ಲಿ ಪಕ್ಷವು ಪುನರುಚ್ಚರಿಸಿತು. ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಈ ವೇಳೆ ಒತ್ತಾಯಿಸಿತು.

ಬಿಹಾರ ಮುಖ್ಯಮಂತ್ರಿ, ಜೆಡಿಯು ಅಧ್ಯಕ್ಷ ನಿತೀಶ್‌ ಕುಮಾರ್‌, ಕೇಂದ್ರ ಸಚಿವರಾದ ಲಲನ್‌ ಸಿಂಗ್‌, ರಾಮ್‌ನಾಥ್‌ ಠಾಕೂರ್‌ ಮತ್ತು ಪಕ್ಷದ ಇತರ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT