ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.24ರಿಂದ ಜೆಇಇ–ಮೇನ್

Last Updated 15 ಡಿಸೆಂಬರ್ 2022, 19:22 IST
ಅಕ್ಷರ ಗಾತ್ರ

ನವದೆಹಲಿ: ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕಾಗಿನ ಜೆಇಇ–ಮೇನ್‌ನ ಮೊದಲ ಅವಧಿಯ ಪರೀಕ್ಷೆಯನ್ನು ಜನವರಿ 24ರಿಂದ 31ರ ವರೆಗೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಗುರುವಾರ ತಿಳಿಸಿದೆ.

ಗಣರಾಜ್ಯೋತ್ಸವ ದಿನದಂದು ಪರೀಕ್ಷೆ ಇರುವುದಿಲ್ಲ. ಕನ್ನಡ, ಇಂಗ್ಲಿಷ್‌ ಸೇರಿದಂತೆ 13 ಭಾಷೆಗಳಲ್ಲಿ ಈ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಎನ್‌ಟಿಎ ಹಿರಿಯ ನಿರ್ದೇಶಕಿ (ಪರೀಕ್ಷೆಗಳು) ಸಾಧನಾ ಪರಾಶರ ತಿಳಿಸಿದ್ದಾರೆ.

ಗುರುವಾರದಿಂದ (ಡಿ.15) ಅರ್ಜಿ ಸ್ವೀಕಾರ ಆರಂಭವಾಗಿದ್ದು, ಜ.12ರ ವರೆಗೆ ಸ್ವೀಕರಿಸಲಾಗುವುದು.
ಎರಡನೇ ಅವಧಿಯ ಪರೀಕ್ಷೆಯು ಏಪ್ರಿಲ್‌ನಲ್ಲಿ ನಡೆಯುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT