ಜೈಪುರ: ಜೀಪೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಗು, ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿ ಮೃತಪಟ್ಟು, 18 ಜನ ಗಾಯಗೊಂಡಿದ್ದಾರೆ. ರಾಜಸ್ಥಾನದ ಸಿರೋಹಿ ಜಿಲ್ಲೆಯ ಪಿಂಡ್ವಾರಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಿರೋಹಿ ಎಸ್‌ಪಿ ಅನಿಲ್ ಕುಮಾರ್ ತಿಳಿಸಿದ್ದಾರೆ.
ವಿರುದ್ಧ ದಿಕ್ಕಿನಲ್ಲಿ ಬಂದ ಜೀಪ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಪುರುಷರು, ಒಂದು ಮಗು ಮತ್ತು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪಿಂಡ್ವಾರಾ ಪೊಲೀಸ್ ಠಾಣೆ ಎಸ್‌ಎಚ್‌ಒ ಹಮೀರ್ ಸಿಂಗ್ ತಿಳಿಸಿದ್ದಾರೆ.