ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇದ್ದ ಜೈಷ್ ಇ ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಕಮಾಂಡರ್ ಆಶಿಕ್ ನೆಂಗ್ರೊ ಮನೆಯನ್ನು ನೆಲಸಮ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜಪೋರಾದ ನ್ಯೂ ಕಾಲೋನಿಯಲ್ಲಿಸರ್ಕಾರಿ ಭೂಮಿಯಲ್ಲಿ ನಿರ್ಮಿಸಿದ್ದ ಎರಡು ಅಂತಸ್ತಿನ ಮನೆಯನ್ನು ಪೊಲೀಸರ ಸಮ್ಮುಖದಲ್ಲಿ ಜಿಲ್ಲಾಡಳಿತ ನೆಲಸಮಗೊಳಿಸಿತು.
2019ರ ಪುಲ್ವಾಮಾ ದಾಳಿಯಲ್ಲಿ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾದ ಪ್ರಕರಣದಲ್ಲಿ ನೆಂಗ್ರೂ ಆರೋಪಿಯಾಗಿದ್ದಾನೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಭಯೋತ್ಪಾದಕರ ಒಳನುಸುಳುವಿಕೆಯಲ್ಲಿ ನೆಂಗ್ರೂ ಭಾಗಿಯಾಗಿರುವುದು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ವಿವಿಧ ಭಯೋತ್ಪಾದಕ ಕೃತ್ಯ ನಡೆಸಲು ಕಾರಣನಾಗಿದ್ದಾನೆ ಎಂದು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.
ಈ ನಡುವೆ ಉಗ್ರ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಮನೆ ನೆಲಸಮಗೊಳಿಸುವುದನ್ನು ವಿರೋಧಿಸಿದ್ದು, ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.