ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌: ಜಾತಿ ಗಣತಿ ನಡೆಸಲು ಸಿಎಂ ಚಂಪೈ ಸೊರೇನ್ ಒಪ್ಪಿಗೆ

Published 18 ಫೆಬ್ರುವರಿ 2024, 7:28 IST
Last Updated 18 ಫೆಬ್ರುವರಿ 2024, 7:28 IST
ಅಕ್ಷರ ಗಾತ್ರ

ರಾಂಚಿ: ರಾಜ್ಯದಲ್ಲಿ ಜಾತಿ ಗಣತಿ ನಡೆಸಲು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಅನುಮತಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ.

ಈ ಬಗ್ಗೆ ಕರಡು ತಯಾರಿಸಿ ಸಚಿವ ಸಂಪುಟದ ಮುಂದೆ ಇಡಬೇಕು ಎಂದು ಸಿಬ್ಬಂದಿ ಸುಧಾರಣೆ ಇಲಾಖೆಗೆ ಸಿಎಂ ನಿರ್ದೇಶಿಸಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಲೋಕಸಭೆ ಚುನಾವಣೆ ಬಳಿಕ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಮುಖ್ಯಮಂತ್ರಿ, ‘ಡೊಡ್ಡ ಜನಸಂಖ್ಯೆಗೆ, ದೊಡ್ಡ ಪಾಲು. ಜಾರ್ಖಂಡ್ ಸಿದ್ಧವಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಸಿಬ್ಬಂದಿ ಸುಧಾರಣಾ ಇಲಾಖೆಯು ಈ ಬಗ್ಗೆ ಗಣತಿ ನಡೆಸಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ರಚಿಸಲಿದೆ. ಅದನ್ನು ಸಚಿವ ಸಂಪುಟದ ಮುಂದೆ ಇಡಲಾಗುವುದು’ ಎಂದು ಮುಖ್ಯಮಂತ್ರಿಗಳ ಕಾರ್ಯದರ್ಶಿ ಪಿಟಿಐಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT